ಆ್ಯಪ್ನಗರ

ಶಾಲೆಗಳ ಕೊಠಡಿಗಳ ನಿರ್ಮಾಣ: 450 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ

ಮುಂದಿನ ಮೂರು ವರ್ಷಗಳಲ್ಲಿ 450 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡ/ ಕೊಠಡಿ ನಿರ್ಮಾಣ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸರಕಾರ ಅನುಮೋದನೆ ನೀಡಿದೆ.

Vijaya Karnataka Web 30 Sep 2018, 4:00 am
ಬೆಂಗಳೂರು: ಮುಂದಿನ ಮೂರು ವರ್ಷಗಳಲ್ಲಿ 450 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡ/ ಕೊಠಡಿ ನಿರ್ಮಾಣ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸರಕಾರ ಅನುಮೋದನೆ ನೀಡಿದೆ.
Vijaya Karnataka Web construction of schools rooms rs 450 crore action plan
ಶಾಲೆಗಳ ಕೊಠಡಿಗಳ ನಿರ್ಮಾಣ: 450 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ


2018-19ನೇ ಸಾಲಿನ ಬಜೆಟ್‌ನಲ್ಲಿ 'ವಿಶೇಷ ಪ್ಯಾಕೇಜ್‌'ನಡಿ ಪ್ರಾಥಮಿಕ ಶಾಲೆಗಳಿಗೆ ಮೂಲಭೂತ ಸೌಕರ‍್ಯ ಕಲ್ಪಿಸಲು 50 ಕೋಟಿ ರೂ. ಹಾಗೂ ರಾಜ್ಯ ಬಂಡವಾಳ ವೆಚ್ಚದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ‍್ಯಕ್ಕಾಗಿ 100 ಕೋಟಿ ರೂ. ಸೇರಿದಂತೆ ಒಟ್ಟು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಇನ್ನು, ಹೆಚ್ಚು ದಾಖಲಾತಿ ಹೊಂದಿರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡ/ ಕೊಠಡಿಗಳನ್ನು ನೆಲಸಮಗೊಳಿಸಿ ಮರು ನಿರ್ಮಿಸಲಿರುವ ಹಾಗೂ ಜನಪ್ರತಿನಿಧಿಗಳಿಂದ ಬಂದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಈ ಸಾಲಿನಲ್ಲಿ 300 ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನು ರೂಪಿಸಿ ಶಿಕ್ಷಣ ಇಲಾಖೆ ಆಯುಕ್ತರು ಸರಕಾರಕ್ಕೆ ಸಲ್ಲಿಸಿದ್ದರು.

''ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು 176 ಪಬ್ಲಿಕ್‌ ಶಾಲೆ ಹಾಗೂ ಇತರೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ತರಗತಿ ಕೊಠಡಿ, ಪ್ರಯೋಗಾಲಯ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ 150 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. 2018-19ನೇ ಸಾಲಿನ ಬಜೆಟ್‌ನ ಮುಂದುವರಿಕೆ ಕಾರ್ಯಕ್ರಮಗಳಿಗೆ ಮೊದಲನೇ ಹಾಗೂ ಎರಡನೇ ತ್ರೈಮಾಸಿಕ ಅವಧಿಗೆ 75 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ,'' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ (ಯೋಜನೆ) ಎಸ್‌.ಆರ್‌.ಎಸ್‌. ನಾಧನ್‌ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ