ಆ್ಯಪ್ನಗರ

ವಂಚನೆ ಪ್ರಕರಣ ಕಡಿವಾಣಕ್ಕೆಸಿಎಂ ಸೂಚನೆ

ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟು ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಖಡಕ್‌ ಸೂಚನೆ ಕೊಟ್ಟಿದ್ದಾರೆ.

Vijaya Karnataka 2 Aug 2019, 5:00 am
ಬೆಂಗಳೂರು : ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟು ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಖಡಕ್‌ ಸೂಚನೆ ಕೊಟ್ಟಿದ್ದಾರೆ. ಪೊಲೀಸ್‌ ಅಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಿದರು.
Vijaya Karnataka Web contorl fraud case says yadiyurappa
ವಂಚನೆ ಪ್ರಕರಣ ಕಡಿವಾಣಕ್ಕೆಸಿಎಂ ಸೂಚನೆ


''ರಾಜ್ಯದಲ್ಲಿ ವಂಚನೆ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ. ಇದರ ನಿಗ್ರಹಕ್ಕೆ ಕಟ್ಟೆಚ್ಚರ ವಹಿಸಬೇಕು. ಬೆಂಗಳೂರಿನ ಬಗ್ಗೆ ಇಡೀ ಜಗತ್ತು ಗಮನ ಹರಿಸುತ್ತದೆ. ನಗರದಲ್ಲಿ ಅಕ್ರಮ ಚಟುವಟಿಕೆ ನಡೆಯದಂತೆ ನಿಗಾ ಇಡಬೇಕು. ಉನ್ನತ ತಂತ್ರಜ್ಞಾನದ ಸಹಾಯದಿಂದ ಅಪರಾಧ ಪ್ರಕರಣ ತಡೆಗಟ್ಟಬೇಕು. ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಕಡ್ಡಾಯವಾಗಿ ಗಸ್ತು ತಿರುಗಬೇಕು,'' ಎಂಬ ನಿರ್ದೇಶನ ನೀಡಿದರು.

''ಬೆಂಗಳೂರಿನಲ್ಲಿ ಭಯೋತ್ಪಾದಕರು ಬಂದು ನೆಲಸದಂತೆ ಎಚ್ಚರ ವಹಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ಕೊಡಬೇಕು. ರಾಜ್ಯದಲ್ಲಿ ಕೋಮು ಗಲಭೆಯಾಗದಂತೆ ನೋಡಿಕೊಳ್ಳಬೇಕು.ಗಲಭೆಗೆ ಪ್ರಚೋದಿಸುವವರು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಎಲ್ಲ ಧರ್ಮಗಳ ಹಬ್ಬಗಳ ಆಚರಣೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು. ಹಬ್ಬವಿರುವಾಗ ವಿಶೇಷ ಭದ್ರತೆ ಕಲ್ಪಿಸಬೇಕು.ಖಾಲಿಯಿರುವ 25,174 ಪೊಲೀಸ್‌ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.'' ಎಂದು ಸೂಚಿಸಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಅಲೋಕ್‌ಕುಮಾರ್‌ ಸೇರಿದಂತೆ ಉನ್ನತಾಧಿಕಾರಿಗಳು ಸಭೆಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ