ಆ್ಯಪ್ನಗರ

ಕೊರೊನಾ ಎಫೆಕ್ಟ್‌: ಫೀವರ್‌ ಕ್ಲಿನಿಕ್‌ಗಳಾಗಲಿವೆ ಇಂದಿರಾ ಕ್ಯಾಂಟೀನುಗಳು!

ಕೊರನಾ ವೈರಸ್‌ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಫೀವರ್ ಕ್ಲಿನಿಕ್‌ಗಳಾಗಿ ಪರಿವರ್ತಿಸಲು ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.

Vijaya Karnataka Web 23 Mar 2020, 3:38 pm
ಬೆಂಗಳೂರು: ಕೊರನಾ ವೈರಸ್‌ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಫೀವರ್ ಕ್ಲಿನಿಕ್‌ಗಳಾಗಿ ಪರಿವರ್ತಿಸಲು ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.
Vijaya Karnataka Web indira canteen


ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆಗಿನ‌ ಸಿಎಂ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಂಗಳೂರಲ್ಲಿ 28 ವಿಧಾನಸಭಾ ಕ್ಷೇತ್ರದಲ್ಲಿ ಮೂರು ತಿಂಗಳ ಕಾಲ ಫೀವರ್ ಕ್ಲಿನಿಕ್ ನಿರ್ಮಿಸಲಾಗುವುದು. ರಾಜ್ಯದಲ್ಲಿ ಪ್ರತಿ ಎರಡು ಕ್ಷೇತ್ರಗಳಿಗೆ ಒಂದು ಕ್ಲಿನಿಕ್ ನಿರ್ಮಿಸಲು ವೈದ್ಯರ ಸಲಹೆ ನೀಡಿದ್ದಾರೆ.

ಕ್ಲಿನಿಕ್‌ನಲ್ಲಿ ಸ್ಕ್ರೀನಿಂಗ್ ಟೆಸ್ಟ್ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲು ನಿರ್ಧರಿಸಲಾಗಿದೆ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿನ ಎಕ್ಯುಪ್‌ಮೆಂಟ್ ಸೇರಿದಂತೆ ಹಲವು ಸಾಮಾಗ್ರಿಗಳನ್ನು ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಮುಂದಿನ 2 ವಾರಗಳಲ್ಲಿ ಭಾರತಕ್ಕೆ ಅಪ್ಪಳಿಸಲಿದೆ ಕೊರೊನಾ ಸುನಾಮಿ; ಶಾಕಿಂಗ್‌ ಸತ್ಯ ಬಿಚ್ಚಿಟ್ಟ ತಜ್ಞ..!

ಜನರು ಎಷ್ಟೇ ಹೇಳಿದ್ರು ಮನೆಯಿಂದ ಹೊರಗೆ ಬರ್ತಾ ಇದ್ದಾರೆ. ಜನರ ಹಿತ ದೃಷ್ಠಿಯಿಂದ ಇಡೀ ಕರ್ನಾಟಕ ಲಾಕ್ ಡೌನ್ ಮಾಡಲು ಸರ್ಕಾರ ತಿರ್ಮಾನ ಕೈಗೊಳ್ಳಲಾಗುತ್ತಿದೆ. ಇಂದು ಸಂಜೆ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕೊರೊನಾ ವೈರಸ್ ಲೈವ್ ಅಪ್ಡೇಟ್ಸ್: ದೇಶದಲ್ಲಿ ಸೋಂಕಿತ ಪ್ರಕರಣ 415ಕ್ಕೆ ಏರಿಕೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ