ಆ್ಯಪ್ನಗರ

ರಾಜ್ಯದಲ್ಲಿ ಲಾಕ್‌ಡೌನ್‌ ಇನ್ನಷ್ಟು ಕಠಿಣ, ಪೊಲೀಸರಿಗೆ ಪೂರ್ಣ ಅಧಿಕಾರ ನೀಡಿದ ಸರಕಾರ

ರಾಜ್ಯದಲ್ಲಿ ಮಂಗಳವಾರದಿಂದ ಲಾಕ್‌ಡೌನ್‌ ಇನ್ನಷ್ಟು ಕಠಿಣವಾಗಲಿದ್ದು, ಪೊಲೀಸರಿಗೆ ಪೂರ್ಣ ಅಧಿಕಾರವನ್ನು ನೀಡಿ ರಾಜ್ಯ ವಿಪತ್ತು ನಿರ್ವಹಣಾ ತಂಡ ಆದೇಶ ಹೊರಡಿಸಿದೆ. ಲಾಕ್‌ಡೌನ್‌ ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

Vijaya Karnataka Web 6 Apr 2020, 10:45 pm
ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಜನ ಹಾಗೂ ವಾಹನಗಳ ಸಂಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮತ್ತಷ್ಟು ಕಠಿಣಗೊಳಿಸಲು ಪೊಲೀಸರಿಗೆ ಪೂರ್ಣ ಅಧಿಕಾರ ನೀಡಲಾಗಿದೆ. ಹೀಗಾಗಿ ಮುಂದಿನ 8 ದಿನಗಳ ಕಾಲ ಅಂದರೆ ಏ.14ರವರೆಗೆ ಲಾಕ್‌ಡೌನ್‌ ಇನ್ನಷ್ಟು ಕಠಿಣವಾಗಲಿದೆ.
Vijaya Karnataka Web lockdown


ಲಾಕ್‌ಡೌನ್‌ ಇದ್ದರೂ ಜನ ಅನಗತ್ಯವಾಗಿ ಓಡಾಡುವುದು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇದಕ್ಕಾಗಿ ಲಾಕ್‌ಡೌನ್‌ನ್ನು ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ಅಖಾಡಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕೆ ಇಳಿದಿದ್ದು, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಫುಲ್‌ ಪವರ್‌ ನೀಡಿ ಆದೇಶ ಹೊರಡಿಸಿದ್ದು, ಲಾಕ್‌ಡೌನ್‌ ಉಲ್ಲಂಘಿಸುವವರು ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

ಲಾಕ್‌ಡೌನ್‌ ವೇಳೆ ನಿಯಮ ಉಲ್ಲಂಘಿಘಿಸುವ ವ್ಯಕ್ತಿಗಳ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಪ್ರಕರಣ ದಾಖಲಿಸಿಕೊಳ್ಳಲು ಠಾಣಾಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷರಾಗಿರುವ ಕಂದಾಯ ಸಚಿವ ಆರ್‌.ಅಶೋಕ್‌ ಅವರು ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇನ್ನಷ್ಟು ಕಠಿಣ, ವಿಸ್ತರಣೆ ಸುಳಿವು ನೀಡಿದ ನಗರ ಪೊಲೀಸ್‌ ಆಯುಕ್ತ

ಜತೆಗೆ ಈ ಕುರಿತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಜಂಟಿ ಕಾರ್ಯದರ್ಶಿಯವರು ಆದೇಶ ಕೂಡ ಹೊರಡಿಸಿದ್ದಾರೆ. ಈಗಾಗಲೇ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಮಂಗಳವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇನ್ನಷ್ಟು ಕಠಿಣವಾಗಲಿದೆ ಎಂದು ಹೇಳಿದ್ದಾರೆ. ಇದುವರೆಗೂ ಕರ್ನಾಟಕದಲ್ಲಿ 163 ಕೊರೊನಾ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿವೆ. ಇದರಲ್ಲಿ ನಾಲ್ವರು ಮೃತಪಟ್ಟಿದ್ದರೆ, 23 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮಹಿಳೆಯರ ಮುಂದೆ ಕೊರೊನಾ ಪವರ್‌ ಕಡಿಮೆ, ಸೋಂಕು ಎದುರಿಸುವ ಶಕ್ತಿ ಸ್ತ್ರೀಯರಿಗೇ ಹೆಚ್ಚು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ