ಆ್ಯಪ್ನಗರ

ಕೋವಿಡ್‌ ಲಸಿಕೆ ನೀಡಿಕೆ ಅಭಿಯಾನ ಚಾಲನೆಗೆ ಕೌಂಟ್‌ಡೌನ್! ರಾಜ್ಯದಲ್ಲಿ ಅಂತಿಮ ಹಂತದ ಸಿದ್ಧತೆ ಹೇಗಿದೆ?

ಕೋವಿಡ್‌ ಲಸಿಕೆ ನೀಡಿಕೆ ಅಭಿಯಾನ ಚಾಲನೆಗೆ ಕೌಂಟ್‌ಡೌನ್ ಶುರುವಾಗಿದೆ. ಶನಿವಾರ ಬೆಳಗ್ಗೆ 10.30 ಗೆ ಲಸಿಕೆ ನೀಡಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

Vijaya Karnataka Web 16 Jan 2021, 9:34 am
ಬೆಂಗಳೂರು: ಭಾರೀ ನಿರೀಕ್ಷೆ ಸೃಷ್ಟಿಸಿರುವ ಕೋವಿಡ್‌ ಲಸಿಕೆ ನೀಡುವ ದಿನ ಕೊನೆಗೂ ಬಂದೇ ಬಿಟ್ಟಿದೆ. ದೇಶದಾದ್ಯಂತ ಮೊದಲ ಹಂತದ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ರಾಜ್ಯದಲ್ಲೂ ಯಾವುದೇ ಸಮಸ್ಯೆ ಆಗದಂತೆ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
Vijaya Karnataka Web covid-19 vaccine rep


ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶನಿವಾರ ಬೆಳಗ್ಗೆ 10.30 ಕ್ಕೆ ಚಾಲನೆ ನೀಡಲಿದ್ದಾರೆ. ವಿಕ್ಟೋರಿಯಾ ಆವರಣದಲ್ಲಿ ಇರುವ ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಎಸ್‌ ಯಡಿಯೂರಪ್ಪ ಅಭಿಯಾನಕ್ಕೆ ವರ್ಚುವಲ್ ಮೂಲಕ ಚಾಲನೆಯನ್ನು ನೀಡಲಿದ್ದಾರೆ.

30 ಕೋಟಿ ಜನರಿಗೆ ಕೋವಿಡ್‌ ಲಸಿಕೆ! ಸನ್ನದ್ಧವಾಗಿರಲು ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ

ಮೊದಲ ಹಂತದಲ್ಲಿ ಪೌರಕಾರ್ಮಿಕರಿಗೆ ಲಸಿಕೆ

ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಹೆಸರು ನೊಂದಾಯಿಸಲ್ಪಟ್ಟ ಪೌರಕಾರ್ಮಿಕರಿಗೆ ನೀಡಲಾಗುತ್ತದೆ. ಬಳಿಕ ಆರೋಗ್ಯ ಸಿಬ್ಬಂದಿ, ಪೊಲೀಸರು ಲಸಿಕೆ ಡೋಸ್ ಪಡೆಯಲಿದ್ದಾರೆ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮನವಿ ಮಾಡಿದ್ದಾರೆ.

ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಸೇರಿದಂತೆ ಒಟ್ಟು 243 ಕೇಂದ್ರಗಳಲ್ಲಿ ನೀಡಲಾಗುವುದು.

ಕೋವಿಡ್ ಲಸಿಕೆ ಶೇಖರಣೆ ಮಾಡಲು ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ವ್ಯವಸ್ಥೆಯನ್ನು ಮಾಡಲಾಗಿದೆ. ಮೊದಲ ಹಂತದಲ್ಲಿ ರಾಜ್ಯದಲ್ಲಿ ಒಟ್ಟು 8,14,500 ಡೋಸ್ ಲಭ್ಯವಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ