ಆ್ಯಪ್ನಗರ

ಸಿಪಿಎಂನಿಂದ ಮಾಜಿ ಶಾಸಕ ಜಿ.ವಿ. ಶ್ರೀರಾಮ ರೆಡ್ಡಿ ಉಚ್ಚಾಟನೆ

​​ಶ್ರೀರಾಮರೆಡ್ಡಿ ಬಾಗೇಪಲ್ಲಿಯಲ್ಲಿ ಸಿಪಿಎಂ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿದ್ದರು. 1999, 2004ರಲ್ಲಿ ಬಾಗೇಪಲ್ಲಿಯಿಂದ ಸಿಪಿಎಂ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು.

Vijaya Karnataka 9 Jul 2020, 11:46 pm
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಮಾಜಿ ಶಾಸಕ ಹಾಗೂ ಸಿಪಿಎಂ ರಾಜ್ಯ ಮುಖಂಡ ಜಿ.ವಿ. ಶ್ರೀರಾಮರೆಡ್ಡಿ ಅವರನ್ನು ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡ ಆರೋಪದಲ್ಲಿ ಪಕ್ಷದ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಕೇಂದ್ರ ಸಮಿತಿ ಸೂಚನೆ ಮೇರೆಗೆ ಸಿಪಿಎಂ ಜಿಲ್ಲಾ ಸಮಿತಿ ಕಾರ್ಯದರ್ಶಿ ಜಯರಾಮರೆಡ್ಡಿ ಈ ಆದೇಶ ಹೊರಡಿಸಿದ್ದಾರೆ.
Vijaya Karnataka Web GV Shreerama Reddy


ಎಪಿಎಂಸಿ ಅಧ್ಯಕ್ಷ ಚುನಾವಣೆ ವೇಳೆ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ. ಸಿಪಿಎಂ ಪಕ್ಷದಿಂದ ಎಪಿಎಂಸಿಗೆ ಆಯ್ಕೆಯಾಗಿದ್ದ ಸೋಮಶೇಖರ ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಲು ಶ್ರೀರಾಮರೆಡ್ಡಿ ಕಾರಣ. ನೋಟಿಸ್‌ ನೀಡಿದ್ದರೂ ಉತ್ತರಿಸಿಲ್ಲ ಎಂಬ ಆರೋಪ ಹೊರಿಸಲಾಗಿದೆ. 2

2018ರಲ್ಲೂ ಇದೇ ರೀತಿ ರಾಜ್ಯ ಸಮಿತಿ ಸ್ಥಾನಗಳಿಂದ ಅವರನ್ನು ದೂರವಿಡಲಾಗಿತ್ತು. ಪ್ರಾಥಮಿಕ ಸದಸ್ಯತ್ವ ಮಾತ್ರ ಉಳಿಸಲಾಗಿತ್ತು.

............ಕಳೆದ ಜನವರಿಯಲ್ಲೇ ಪಕ್ಷ ಬಿಟ್ಟಿರುವೆ. ಹಾಗಾಗಿ ಉಚ್ಚಾಟಿಸುವ ಪ್ರಮೇಯವೇ ಬರುವುದಿಲ್ಲ.
ಜಿ.ವಿ.ಶ್ರೀರಾಮರೆಡ್ಡಿ, ಬಾಗೇಪಲ್ಲಿ ಮಾಜಿ ಶಾಸಕ


ಶ್ರೀರಾಮರೆಡ್ಡಿ ಬಾಗೇಪಲ್ಲಿಯಲ್ಲಿ ಸಿಪಿಎಂ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿದ್ದರು. 1999, 2004ರಲ್ಲಿ ಬಾಗೇಪಲ್ಲಿಯಿಂದ ಸಿಪಿಎಂ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ