ಆ್ಯಪ್ನಗರ

ದಲಿತ ನಾಯಕನಿಗೇ ರಾಜ್ಯಾಧ್ಯಕ್ಷ ಪಟ್ಟ : ದೇವೇಗೌಡ

ಮಾಜಿ ಸಿಎಂ ಸಿದ್ದರಾಮಯ್ಯ 'ಅಹಿಂದ' ಮಂತ್ರಕ್ಕೆ ಪ್ರತಿತಂತ್ರ ಹೆಣೆದು ಪಕ್ಷ ಸಂಘಟನೆಗೆ ಪೂರ್ಣ ಪ್ರಮಾಣದಲ್ಲಿ ಅಣಿಯಾಗಿರುವ ಜೆಡಿಎಸ್‌ ವರಿಷ್ಠ ಎಚ್‌...

Vijaya Karnataka 29 Jun 2019, 5:00 am
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 'ಅಹಿಂದ' ಮಂತ್ರಕ್ಕೆ ಪ್ರತಿತಂತ್ರ ಹೆಣೆದು ಪಕ್ಷ ಸಂಘಟನೆಗೆ ಪೂರ್ಣ ಪ್ರಮಾಣದಲ್ಲಿ ಅಣಿಯಾಗಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು, ದಲಿತ ಮುಖಂಡರಿಗೇ ರಾಜ್ಯಾಧ್ಯಕ್ಷ ಸ್ಥಾನದ ಪಟ್ಟ ಕಟ್ಟಲು ನಿರ್ಧರಿಸಿದ್ದಾರೆ.
Vijaya Karnataka Web H K Kumarswamy (JDS) SKP


ಸಕಲೇಶಪುರ ಮೀಸಲು ಕ್ಷೇತ್ರದಿಂದ ಸತತ 6ನೇ ಬಾರಿಗೆ ಶಾಸಕರಾಗಿರುವ ಎಚ್‌.ಕೆ.ಕುಮಾರಸ್ವಾಮಿ ಅವರು ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ , ಬಿ.ಬಿ.ನಿಂಗಯ್ಯ ಹೆಸರುಗಳೂ ಚಾಲ್ತಿಯಲ್ಲಿವೆ.

ಪಕ್ಷ ನಿಷ್ಠೆ , ಹಿರಿತನ ಹಾಗೂ ಎಲ್ಲರನ್ನೂ ಸಂಭಾಳಿಸಿಕೊಂಡು ಹೋಗುವ ಸೌಮ್ಯ ಸ್ವಭಾವದ ಎಚ್‌.ಕೆ.ಕುಮಾರಸ್ವಾಮಿ ಅವರೇ ರಾಜ್ಯಾಧ್ಯಕ್ಷ ಹುದ್ದೆಗೆ ಸೂಕ್ತ ವ್ಯಕ್ತಿ ಎಂಬ ತೀರ್ಮಾನಕ್ಕೆ ದೇವೇಗೌಡರು ಬಂದಿದ್ದು, ಶುಕ್ರವಾರ ಅವರನ್ನು ಪಕ್ಷದ ಕಚೇರಿಗೆ ಕರೆಸಿಕೊಂಡು ಹೊಸ ಜವಾಬ್ದಾರಿಗೆ ಒಪ್ಪಿಸಿದ್ದಾರೆ. ಆದರೆ ಸಿಎಂ ಕುಮಾರಸ್ವಾಮಿ ಹಾಗೂ ಹಾಲಿ ಅಧ್ಯಕ್ಷ ವಿಶ್ವನಾಥ್‌ ಮಧು ಬಂಗಾರಪ್ಪ ಅವರ ಬಗ್ಗೆ ಹೊಂದಿದ್ದರೆಂದು ಜೆಡಿಎಸ್‌ ಮೂಲಗಳು ಹೇಳಿವೆ.

ಪಕ್ಷದ ಕಚೇರಿಯಲ್ಲಿ ಶುಕ್ರವಾರ ದೇವೇಗೌಡರು ಪರಿಶಿಷ್ಟ ಸಮುದಾಯದ ಮುಖಂಡರ ಸಭೆ ನಡೆಸಿದರು. ''ಪರಿಶಿಷ್ಟ ಸಮುದಾಯದವರನ್ನು ರಾಜ್ಯಾಧ್ಯಕ್ಷ ಹುದ್ದೆಯ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದ್ದು, ಯಾರನ್ನು ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಜುಲೈ 10 ಅಥವಾ 11 ರಂದು ಅರಮನೆ ಮೈದಾನದಲ್ಲಿ ಪರಿಶಿಷ್ಟರ ಬೃಹತ್‌ ಸಮಾವೇಶ ನಡೆಸಲಾಗುತ್ತಿದೆ. ಸಮಾವೇಶದಲ್ಲೇ ನೂತನ ಅಧ್ಯಕ್ಷರನ್ನು ಘೋಷಣೆ ಮಾಡಲಾಗುವುದು'' ಎಂದು ಸಭೆ ಬಳಿಕ ದೇವೇಗೌಡರು ತಿಳಿಸಿದರು.

ಇದಕ್ಕೆ ಮುನ್ನ ಪರಿಶಿಷ್ಟ ಸಮುದಾಯದ ಪಕ್ಷದ ಶಾಸಕರು, ಮಾಜಿ ಶಾಸಕರು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿದ ದೇವೇಗೌಡರು, ''ಚುನಾವಣೆಗಳು ಯಾವಾಗ ಬೇಕಾದರೂ ಬರಲಿ. ತಕ್ಷಣದಿಂದಲೇ ಸಂಘಟನೆ ಕೆಲಸದ ಮೂಲಕ ಪಕ್ಷಕ್ಕೆ ಬಲ ತುಂಬುವ ಕೆಲಸವನ್ನು ಚುರುಕುಗೊಳಿಸಬೇಕು. ನೂತನ ರಾಜ್ಯಾಧ್ಯಕ್ಷರ ನೇಮಕದ ಜತೆಗೆ, ಹೊಸ ಪದಾಧಿಕಾರಿಗಳನ್ನೂ ನೇಮಕ ಮಾಡಲಾಗುವುದು. ಈ ನೇಮಕದಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡಲಾಗುವುದು,'' ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ