ಆ್ಯಪ್ನಗರ

ಸಾರಿಗೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ

ವಿಕ ಸುದ್ದಿಲೋಕ ಬೆಂಗಳೂರು ನಗರದ ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ನಾಲ್ಕು ಸಾರಿಗೆ ನಿಗಮಗಳು, ...

Vijaya Karnataka 31 Aug 2019, 5:00 am
ಬೆಂಗಳೂರು : ನಗರದ ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ನಾಲ್ಕು ಸಾರಿಗೆ ನಿಗಮಗಳು, ಸಾರಿಗೆ ಇಲಾಖೆ, ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
Vijaya Karnataka Web dcm savadi visit ksrtc office
ಸಾರಿಗೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ


ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಸಾರಿಗೆ ಇಲಾಖೆ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಕಾರ್ಯ ವೈಖರಿಯ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಮಧ್ಯಾಹ್ನ 3 ರಿಂದ ಸಂಜೆ 7ರವರೆಗೆ ಅಧಿಕಾರಿಗಳು ಸಚಿವರಿಗೆ ಮಾಹಿತಿ ಒದಗಿಸಿದರು. ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಮ್ಮ ನಿಗಮಗಳ ಕಾರ್ಯವ್ಯಾಪ್ತಿ, ಲಾಭ, ನಷ್ಟ, ಬಸ್‌ಗಳ ಕಾರ್ಯಾಚರಣೆ ವಿವರ ಹಾಗೂ ಸಮಸ್ಯೆಗಳನ್ನು ಹೇಳಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ