ಆ್ಯಪ್ನಗರ

ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಜೂ.18ರಂದು ಲಾರಿ ಮುಷ್ಕರ

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ, ವಾಹನಗಳ ಥರ್ಡ್‌ ಪಾರ್ಟಿ (ಮೂರನೆ ವ್ಯಕ್ತಿ) ಪಾಲಿಸಿ ಪ್ರೀಮಿಯಂ ದರ ಹೆಚ್ಚಳ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂ.18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಅಖಿಲ ಭಾರತ ಸರಕು ಸಾಗಣೆ ವಾಹನ ಮಾಲೀಕರ ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಬಿ.ಚನ್ನಾರೆಡ್ಡಿ ತಿಳಿಸಿದರು.

Vijaya Karnataka 26 May 2018, 7:54 am
ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆ, ವಾಹನಗಳ ಥರ್ಡ್‌ ಪಾರ್ಟಿ (ಮೂರನೆ ವ್ಯಕ್ತಿ) ಪಾಲಿಸಿ ಪ್ರೀಮಿಯಂ ದರ ಹೆಚ್ಚಳ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂ.18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಅಖಿಲ ಭಾರತ ಸರಕು ಸಾಗಣೆ ವಾಹನ ಮಾಲೀಕರ ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಬಿ.ಚನ್ನಾರೆಡ್ಡಿ ತಿಳಿಸಿದರು.
Vijaya Karnataka Web lorry


ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,''ಡೀಸೆಲ್‌ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದು ಇಂದು ನಿನ್ನೆಯದಲ್ಲ, ಕಳೆದ ಕೆಲ ವರ್ಷಗಳಿಂದ ಸರಕಾರ ಇದೇ ರೀತಿಯ ಕಣ್ಣಾಮುಚ್ಚಾಲೆ ಆಡುತ್ತಿದೆ. ಇತ್ತ ವಾಹನಗಳ ಮೂರನೆ ವ್ಯಕ್ತಿ ಪಾಲಿಸಿ ಪ್ರೀಮಿಯಂ ಅನ್ನು ಸಹ 2002ರಿಂದ ನಿರಂತರವಾಗಿ ಏರಿಕೆ ಮಾಡುತ್ತಿದೆ. ಇದು ಶೇ.1117ರಷ್ಟು ಹೆಚ್ಚಳವಾಗಿದ್ದು, ಇದನ್ನು ನಿಯಂತ್ರಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಾಗಾಗಿ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ಹೇಳಿದರು.

''ಜೂ.18 ರೊಳಗೆ ಬೇಡಿಕೆ ಈಡೇರಿಸದಿದ್ದರೆ, ಅಂದು ರಾತ್ರಿಯಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಕಾಲ ಸರಕು-ಸಾಗಣೆ ವಾಹನ ಸಂಚಾರ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಟೋಲ್‌ ಭರಿಸುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳಿದ್ದು, ಸರಕಾರ ಲಾರಿ ಮಾಲೀಕರ ಯಾವ ಸಮಸ್ಯೆಗಳನ್ನೂ ಪರಿಗಣಿಸದೆ ಏಕಪಕ್ಷೀಯ ತೀರ್ಮಾನ ಕೈಗೊಳ್ಳುತ್ತಿದೆ. ಖಾಸಗಿ ಕಂಪನಿಗಳಿಗೆ ಮೂರನೆ ವ್ಯಕ್ತಿ ಪಾಲಿಸಿ(ಥರ್ಡ್‌ ಪಾರ್ಟಿ ಪ್ರೀಮಿಯಂ) ವಹಿವಾಟನ್ನು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಲಾರಿ ಮಾಲೀಕರು ಸಮಸ್ಯೆ ಎದುರಿಸುತ್ತಿದ್ದಾರೆ,'' ಎಂದು ಬೇಸರ ವ್ಯಕ್ತಪಡಿಸಿದರು.

''ಶೇ.80ರಷ್ಟು ಲಾರಿ ಮಾಲೀಕರು ಒಂದರಿಂದ ಎರಡು ವಾಹನ ಹೊಂದಿದ್ದು, ವಾಹನ ಖರೀದಿ ವೇಳೆ ಬ್ಯಾಂಕ್‌ನಿಂದ ಪಡೆದ ಸಾಲ, ಬಡ್ಡಿ ಹಣ ಪಾವತಿಗೆ ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಡುವೆ ಮಾಲೀಕರು ಡೀಸೆಲ್‌ಗಾಗಿ ಮಾಡುವ ವೆಚ್ಚವನ್ನು ಸಹ ಬಾಡಿಗೆ ರೂಪದಲ್ಲಿ ಪಡೆಯಲಾಗುತ್ತಿಲ್ಲ. ಹಾಗಾಗಿ ಕೂಡಲೇ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಖಚಿತ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ