ಆ್ಯಪ್ನಗರ

ಡಿಜಿಪಿ ನೇಮಕ ವಿಚಾರ: ಸರಕಾರಕ್ಕೆ ತುರ್ತು ನೋಟಿಸ್‌

ಸುಪ್ರೀಂಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಹುದ್ದೆಗೆ ನೀಲಮಣಿ ಎನ್‌...

Vijaya Karnataka 18 Jun 2019, 5:00 am
ಬೆಂಗಳೂರು: ಸುಪ್ರೀಂಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಹುದ್ದೆಗೆ ನೀಲಮಣಿ ಎನ್‌.ರಾಜು ಅವರನ್ನು ನೇಮಕ ಮಾಡಲಾಗಿದೆ ಎಂದು ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿಗೊಳಿಸಿದೆ.
Vijaya Karnataka Web cap


ಡಿಜಿಪಿ (ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆ) ಎಂ.ಎನ್‌. ರೆಡ್ಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಎಲ್‌.ನಾರಾಯಣ ಸ್ವಾಮಿ ಮತ್ತು ಆರ್‌. ದೇವದಾಸ್‌ ಅವರಿದ್ದ ವಿಭಾಗೀಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತು.

ರೆಡ್ಡಿ ಅವರು ಸಲ್ಲಿಸಿದ ಅರ್ಜಿಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಪುರಸ್ಕರಿಸದ ಕಾರಣ ರೆಡ್ಡಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ