ಆ್ಯಪ್ನಗರ

ದಿನೇಶ್‌ ಗುಂಡೂರಾವ್‌ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ?

ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್‌ ಮುಖಂಡರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ಗೆ ಮನವಿ ಮಾಡಿದ್ದಾರೆ.

Vijaya Karnataka Web 14 Jun 2018, 3:04 pm
ಬೆಂಗಳೂರು: ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್‌ ಮುಖಂಡರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ಗೆ ಮನವಿ ಮಾಡಿದ್ದಾರೆ. ಇದಕ್ಕೆ ವೇಣುಗೋಪಾಲ್‌ ಸಮ್ಮಿತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ
Vijaya Karnataka Web dinesh


ಸಮ್ಮಿಶ್ರ ಸರಕಾರದ ಸಮನ್ವಯ ಸಭೆಯ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ವೇಣುಗೋಪಾಲ್‌ ಅವರನ್ನು ರಾಜ್ಯದ ಕಾಂಗ್ರೆಸ್‌ನ ಮುಖಂಡರು ಭೇಟಿ ಮಾಡಿದ್ದಾರೆ. ಇದೇ ವೇಳೆ ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರು ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ, ಸಚಿವ ಸ್ಥಾನ ನೀಡುವ ಕುರಿತು ಮಾತುಕತೆ ನಡೆಸಿದ್ದಾರೆ.

2019ರ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಕೆಪಿಸಿಸಿಯ ಜವಾಬ್ದಾರಿ ಹೊರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಕುರಿತು ಪಕ್ಷದ ಹಿರಿಯ ಮುಖಂಡರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಅಲ್ಲದೆ ಇತ್ತೀಚೆಗೆ ನಡೆದ ಸಂಸದರ ಸಭೆಯಲ್ಲಿ ಹಿರಿಯ ನಾಯಕರಾದ ಕೆ. ಮುನಿಯಪ್ಪ ಮತ್ತು ಬಿ.ಕೆ ಹರಿಪ್ರಸಾದ ಸೇರಿದಂತೆ ಇನ್ನಿತರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆ ಕಾಂಗ್ರೆಸ್‌ಗೆ ಒಂದು ಪಾಠ. ಹೀಗಾಗಿ ಎಲ್ಲರನ್ನೂ ಗಣನೆಗೆ ತೆಗೆದುಕೊಂಡು ಪಕ್ಷದಲ್ಲಿ ಚರ್ಚಿಸಿದ ಬಳಿವೇ ತೀರ್ಮಾನ ಕೈಗೊಳ್ಳುವುದು ಒಳಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವ ಕೃಷ್ಣಭೈರೇಗೌಡ, ಕಾಂಗ್ರೆಸ್‌ ವಕ್ತಾರ ರಿಜ್ವಾನ್‌ ಸೇರಿ ಮತ್ತಿತರರು ದಿನೇಶ್‌ ಗುಂಡೂರಾವ್‌ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ವೇಣುಗೋಪಾಲ್‌ ಸಹ ಸಮ್ಮಿತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ