ಆ್ಯಪ್ನಗರ

ಡಿಜೆ ಹಳ್ಳಿ ಗಲಭೆ: ಮತ್ತಷ್ಟು ಕಿಡಿಗೇಡಿಗಳ ಬಂಧನ, ಸ್ಥಳದಲ್ಲಿ ಪೊಲೀಸ್‌ ಸರ್ಪಗಾವಲು

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳನ್ನು ಬಂಧಿಸುವ ಕಾರ್ಯ ಮುಂದುವರಿದಿದೆ. ಈಗಾಗಲೇ 200 ಕ್ಕೂ ಆಧಿಕ ಮಂದಿಯನ್ನು ಬಂಧನ ಮಾಡಲಾಗಿದೆ. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಮತ್ತಷ್ಟು ಮಂದಿಯ ಬಂಧನ ಪ್ರಕ್ರಿಯೆ ಮುಂದುವರಿಯಲಿದೆ.

Vijaya Karnataka Web 14 Aug 2020, 9:29 am
ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 200 ಮಂದಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಿಡಿಗೇಡಿಗಳ ಬಂಧನ ಕಾರ್ಯ ಮುಂದುವರಿದಿದೆ. ಗುರುವಾರ ರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಗಲಭೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ.
Vijaya Karnataka Web dj halli


ಘಟನೆ ನಡೆದ ದಿನದ ಸಿಟಿ ಟಿವಿ ದೃಶ್ಯಾವಳಿ ಹಾಗೂ ಇತರ ವಿಡಿಯೋಗಳ ಮೂಲಕ ಕಿಡಿಗೇಡಿಗಳ ಗುರುತು ಪತ್ತೆ ಹಚ್ಚೋ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಇದರ ಆಧಾರದಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಗುರುವಾರ ರಾತ್ರಿ ಡಿಜೆ ಹಳ್ಳಿ ಸುತ್ತಮುತ್ತ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು 80 ಕ್ಕೂ ಅಧಿಕ ಮಂದಿಯನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಈಗಾಗಲೇ ಬಂಧನದಲ್ಲಿರುವ 81 ಆರೋಪಿಗಳನ್ನು ಬಳ್ಳಾರಿ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ.

ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದಡಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯೆಯೊಬ್ಬರ ಪತಿಯನ್ನು ಅರೆಸ್ಟ್‌ ಮಾಡಲಾಗಿದೆ. ಉಳಿದವರಿಗೆ ಶೋಧ ಕಾರ್ಯ ಮುಂದುವರಿದಿದೆ.

ಹೈ ಅಲರ್ಟ್‌

ಇಂದು ಶುಕ್ರವಾರ ಆದ ಕಾರಣ ಡಿಜೆ ಹಳ್ಳಿ, ಕೆಜಿ ಹಳ್ಳಿ ಸುತ್ತಮುತ್ತ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ಶುಕ್ರವಾರದಂದು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಇರುವುದರಿಂದ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ. ಕೇವಲ ಮಸೀದಿಯ ಮೌಲವಿಗಳಿಗೆ ಮಾತ್ರ ನಮಾಜ್‌ ಮಾಡಲು ಅವಕಾಶ ನೀಡಲಾಗಿದೆ. ಇತರರು ಮನೆಯಲ್ಲೇ ನಮಾಜ್‌ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಸೆಕ್ಷನ್ 114 ಜಾರಿಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ