Please enable javascript.DK Shivakumar,ಕೆಪಿಸಿಸಿಗೆ ಡಿಕೆಶಿ ಸಾರಥಿ, ಕಾಂಗ್ರೆಸ್ ಹೈಕಮಾಂಡ್‌ ಮಹತ್ವದ ಘೋಷಣೆ - dk shivakumar appointed as kpcc president - Vijay Karnataka

ಕೆಪಿಸಿಸಿಗೆ ಡಿಕೆಶಿ ಸಾರಥಿ, ಕಾಂಗ್ರೆಸ್ ಹೈಕಮಾಂಡ್‌ ಮಹತ್ವದ ಘೋಷಣೆ

Vijaya Karnataka Web 11 Mar 2020, 5:27 pm
Subscribe

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಅವರನ್ನು ಹೈಕಮಾಂಡ್‌ ಘೋಷಣೆ ಮಾಡಿದೆ. ಬುಧವಾರ ಈ ಮಹತ್ವದ ಘೋಷಣೆಯನ್ನು ಮಾಡಿದ್ದು ಕೊನೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಗೊಂದಲ ಬಗೆಹರಿದಿದೆ.

dk shivakumar new
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರನ್ನು ಎಐಸಿಸಿ ನೇಮಕ ಮಾಡಿದೆ. ಬುಧವಾರ ಈ ಮಹತ್ವದ ಘೋಷಣೆ ಮಾಡಿದ್ದು, ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಕಾರ್ಯಾಧ್ಯಕ್ಷರಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ, ಅಲ್ಪಸಂಖ್ಯಾತ ಸಮುದಾಯ ಸಲೀಮ್ ಅಹಮ್ಮದ್ ಹಾಗೂ ವಾಲ್ಮೀಕಿ ಸಮುದಾಯದ ಸತೀಶ್ ಜಾರಕಿಹೊಳಿಯನ್ನು ನೇಮಕ ಮಾಡಲಾಗಿದೆ. ಈ ಮೂವರು ಸಿದ್ದರಾಮಯ್ಯ ಆಪ್ತರಾಗಿದ್ದಾರೆ.



kpcc president

ಡಿಕೆಶಿ-ಸಿದ್ದು ಈಗ ಕಾಂಗ್ರೆಸ್ ಜೋಡೆತ್ತು..! 'ಬಂಡೆ' ಯಾಮಾರಿದ್ರೆ ಕಾದಿದೆ ನೂರೆಂಟು ಕುತ್ತು..!

ಡಿಕೆ ಶಿವಕುಮಾರ್‌ಗೆ ಅಧ್ಯಕ್ಷ ಸ್ಥಾನ ನೀಡುದಕ್ಕೆ ಸಿದ್ದರಾಮಯ್ಯ ಬಣದ ಆಕ್ಷೇಪವಿತ್ತು. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡುವುದಾದರೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಸಿದ್ದರಾಮಯ್ಯ ಬೇಡಿಕೆ ಇಟ್ಟಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಚಾರವಾಗಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಇತ್ತೀಚೆಗೆ ದಿನೇಶ್ ಗುಂಡೂರಾವ್ ಜೊತೆಗೂ ಸೋನಿಯಾ ಗಾಂಧಿ ಮಾತುಕತೆ ನಡೆಸಿದ್ದರು.

ಹೀಗಿದ್ದರೂ ಅಧ್ಯಕ್ಷ ಸ್ಥಾನ ಆಯ್ಕೆ ಕುರಿತಾಗಿ ಯಾವುದೇ ನಿರ್ಧಾರವನ್ನು ಕೈಗೊಳ್ಳಲು ಹೈಕಮಾಂಡ್‌ಗೆ ಸಾಧ್ಯವಾಗಿರಲಿಲ್ಲ. ಇದರಿಂದ ಪಕ್ಷ ಸಂಘಟನೆ ಹಾಗೂ ವಿರೋಧ ಪಕ್ಷವಾಗಿ ರಾಜ್ಯದಲ್ಲಿ ಕಾರ್ಯಕ್ರಮ ರೂಪಿಸಲು ಸಾಧ್ಯವಾಗಿರಲಿಲ್ಲ.

ಸಿದ್ದರಾಮಯ್ಯ ರಾಜೀನಾಮೆ ತಿರಸ್ಕಾರ; ಸಿಎಲ್‌ಪಿ, ವಿಪಕ್ಷ ನಾಯಕರಾಗಿ ಮುಂದುವರಿಕೆ

ಕೊನೆಗೂ ಹೈಕಮಾಂಡ್ ಡಿಕೆಶಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ನೀಡಿ ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಕೆಪಿಸಿಸಿ ಜಂಜಾಟಕ್ಕೆ ಬ್ರೇಕ್ ಹಾಕಿದೆ.

ಇನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಲಿದ್ದಾರೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ