ಆ್ಯಪ್ನಗರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಗ್ಗಂಟು; ಹೋಮ ಹವನದ ಮೊರೆ ಹೋದ ಡಿಕೆಶಿ !

ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಈ ನಡುವೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಡಿ ಕೆ ಶಿವಕುಮಾರ್ ಹೊರ ರಾಜ್ಯದಲ್ಲಿ ಹೋಮ ಹವನ ನಡೆಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

Vijaya Karnataka Web 23 Jan 2020, 3:38 pm
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಚಾರ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗಿ ಪರಿಣಮಿಸಿದ್ದು ಈ ನಡುವೆ ಡಿಕೆ ಶಿವಕುಮಾರ್‌ ಟೆಂಪಲ್ ರನ್ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಾರಥಿಯಾಗಿ ಬಹುತೇಕ ಡಿಕೆಶಿ ಹೆಸರು ಅಂತಿಮವಾಗಿದ್ದರೂ ಹೈ ಕಮಾಂಡ್‌ನಿಂದ ಅಧಿಕೃತ ಘೋಷಣೆಯಾಗಲಿಲ್ಲ. ಈ ವಿಚಾರ ಸಂಬಂಧಪಟ್ಟಂತೆ ಪಕ್ಷದಲ್ಲಿ ಗೊಂದಲ ಮುಂದುವರಿಯುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಧ್ಯಪ್ರದೇಶದ ದೇವಸ್ಥಾನದಲ್ಲಿ ಹೋಮ ಹಾಗೂ ವಿಶೇಷ ಪೂಜೆ ಪುರಸ್ಕಾರಗಳನ್ನು ನಡೆಸಿರುವುದು ಕುತೂಹಲ ಕೆರಳಿಸಿದೆ.
Vijaya Karnataka Web dk shivakumar at madhya pradesh temple
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಗ್ಗಂಟು; ಹೋಮ ಹವನದ ಮೊರೆ ಹೋದ ಡಿಕೆಶಿ !


ಮಧ್ಯಪ್ರದೇಶದ ಗ್ವಾಲಿಯಾರ್‌ನ ಧಾತಿಯಾದ ಪೀತಾಂಬರ ಬಾಗಲ್ಮುಖಿ ಹಾಗೂ ಧೂಮವತಿ ದೇಗುಲದಲ್ಲಿ ಗುರುವಾರ ಡಿಕೆಶಿ ಹೋಮ, ಪೂಜೆ ನೆರವೇರಿಸಿದರು. ಕೆಲ ದಿನಗಳ ಹಿಂದೆ ಕುಣಿಗಲ್‌ ತಾಲೂಕಿನ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠಕ್ಕೆ ಡಿಕೆಶಿ ಭೇಟಿ ನೀಡಿ ಶತ ಚಂಡಿ ಮಹಾಯಾಗದಲ್ಲಿ ಭಾಗಿಯಾಗಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆ ಮೊದಲೇ ಡಿಕೆಶಿ ಟೆಂಪಲ್ ರನ್

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಡಿಕೆ ಶಿವಕುಮಾರ್‌ ಅವರಿಗೆ ಕೆಪಿಸಿಸಿ ಪಟ್ಟ ನೀಡಲು ಹೈಕಮಾಂಡ್‌ ಸಮ್ಮತಿ ಸೂಚಿಸಿದೆ ಎಂದು ಹೇಳುತ್ತಿದ್ದರೂ ಕಾರ್ಯಾಧ್ಯಕ್ಷ ಸ್ಥಾನ ವಿಚಾರವಾಗಿ ಸಿದ್ದರಾಮಯ್ಯ ಬಣದ ಬೇಡಿಕೆ ಹಿನ್ನೆಲೆಯಲ್ಲಿ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈ ಕಮಾಂಡ್‌ ನಿರ್ಧರಿಸಿದೆ.

ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಾಲ್ವರು ಕಾರ್ಯಾಧ್ಯಕ್ಷರು ಹಾಗೂ ಸಮನ್ವಯ ಸಮಿತಿಯನ್ನು ರಚಿಸಬೇಕು ಎಂದು ಸಿದ್ದರಾಮಯ್ಯ ಬೇಡಿಕೆ ಇಟ್ಟಿದ್ದಾರೆ. ಆದರೆ ಕಾರ್ಯಾಧ್ಯಕ್ಷರ ನೇಮಕಕ್ಕೆ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಹಿರಿಯ ಕಾಂಗ್ರೆಸ್ ಮುಖಂಡರೂ ಸಾಥ್ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ