ಆ್ಯಪ್ನಗರ

ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ ಡಿ.ಕೆ. ಶಿವಕುಮಾರ್

ಮುಂದಿನ ಆರು ವಾರಗಳ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.

Vijaya Karnataka Web 4 Dec 2020, 9:20 pm
ಬೆಂಗಳೂರು: ಮುಂದಿನ ಆರು ವಾರಗಳ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.
Vijaya Karnataka Web DK Shivakumar


'ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವಧಿಗೆ ಅನುಗುಣವಾಗಿ ಚುನಾವಣೆಗಳು ನಡೆಯಬೇಕು. ಆದರೆ ಬಿಜೆಪಿ ಸರ್ಕಾರ ಇದನ್ನು ಮುಂದಕ್ಕೆ ತಳ್ಳಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಿತ್ತು. ಆದರೆ, ನ್ಯಾಯಾಲಯ ಅದರ ಹುನ್ನಾರಕ್ಕೆ ಕಡಿವಾಣ ಹಾಕಿ, ಚುರುಕು ಮುಟ್ಟಿಸಿದೆ. ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸುತ್ತೇವೆ' ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

'ಬಿಜೆಪಿಯವರು ಗ್ರಾಮ ಪಂಚಾಯ್ತಿ ಚುನಾವಣೆಯನ್ನೂ ಮುಂದೂಡಲು ಪ್ರಯತ್ನಿಸಿದ್ದರು. ಜನಸಾಮಾನ್ಯರಿಗೆ ಅಧಿಕಾರ ಸಿಗಬೇಕು ಎಂಬುದು ಕಾಂಗ್ರೆಸ್ ಉದ್ದೇಶ. ಹೀಗಾಗಿ ಸರ್ಕಾರದ ತೀರ್ಮಾನದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆಗಲೂ ನ್ಯಾಯಾಲಯ ನಮ್ಮ ಅಹವಾಲಿಗೆ ಮನ್ನಣೆ ನೀಡಿತ್ತು.

ಬಿಬಿಎಂಪಿ ಚುನಾವಣೆ ಕುರಿತು ಶುಕ್ರವಾರ ಮಹತ್ವದ ತೀರ್ಪು; ಎಲ್ಲರ ಚಿತ್ತ ಹೈಕೋರ್ಟ್‌ನತ್ತ.!

ಗ್ರಾಮ ಪಂಚಾಯ್ತಿ ಚುನಾವಣೆ ಅಧಿಸೂಚನೆ ಪ್ರಕಟವಾದಾಗ, ಬಿಬಿಎಂಪಿ ಚುನಾವಣೆಯನ್ನೂ ನಡೆಸಬೇಕು ಎಂದು ನಾನು ಒತ್ತಾಯಿಸಿದ್ದೆ. ಸರಕಾರ ಇದಕ್ಕೆ ಕಿವಿಗೊಡಲಿಲ್ಲ. ಹೀಗಾಗಿ ಬಿಬಿಎಂಪಿ ಚುನಾವಣೆ ನಡೆಸಲು ನಮ್ಮ ಪಕ್ಷ ಮತ್ತೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ಕೋರ್ಟ್ ನೀಡಿರುವ ತೀರ್ಪು ಪ್ರಜಾತಂತ್ರ ವ್ಯವಸ್ಥೆಯ ಮೂಲ ಆಶಯವನ್ನು ಎತ್ತಿ ಹಿಡಿದಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಉಪ ಚುನಾವಣೆ ಸೋಲಿನಿಂದ ಡಿಕೆಶಿ ಹತಾಶರಾಗಿದ್ದಾರೆ: ವಿಜಯೇಂದ್ರ ಲೇವಡಿ

ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ತಾವು ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ