ಆ್ಯಪ್ನಗರ

ಶಾಸಕಿ ಅನಿತಾ ಕುಮಾರಸ್ವಾಮಿಗೆ ಹೋಂ ಕ್ವಾರಂಟೈನ್‌ ಆಗಲು ಸಲಹೆ ನೀಡಿದ ವೈದ್ಯರು

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಅವರ ಪತ್ನಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

Vijaya Karnataka Web 17 Apr 2021, 8:33 pm

ಹೈಲೈಟ್ಸ್‌:

  • ಶಾಸಕಿ ಅನಿತಾ ಕುಮಾರಸ್ವಾಮಿಗೆ ಹೋಮ್‌ ಕ್ವಾರಂಟೈನ್‌ ಆಗಲು ವೈದ್ಯರ ಸಲಹೆ
  • ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋವಿಡ್-19 ಸೋಂಕಿಗೆ ಒಳಗಾಗಿರುವ ಹಿನ್ನೆಲೆ
  • ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಎಚ್‌.ಡಿ.ಕುಮಾರಸ್ವಾಮಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Anita Kumaraswamy
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಅವರ ಪತ್ನಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರು ಮುಂದಿನ ಸೂಚನೆ ನೀಡುವವರೆಗೂ ಶಾಸಕರು ಹೋಂ ಕ್ವಾರಂಟೈನ್ ನಲ್ಲೇ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಕೊರೊನಾ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಜೆಪಿ ನಗರದ ಗೃಹಕಚೇರಿ ಬಳಿ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರು ಸಹಕರಿಸಬೇಕೆಂದು ಅನಿತಾ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ರಾಮನಗರ ರಕ್ಷಿಸಿ ಇಲ್ಲದಿದ್ದರೆ ಬೀದಿಗಿಳಿಯುವೆ: ಶಾಸಕಿ ಅನಿತಾ ಕುಮಾರಸ್ವಾಮಿ ಎಚ್ಚರಿಕೆ!

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್‌ ಪಾಸಿಟಿವ್ ಆಗಿರುವ ಕುರಿತಾಗಿ ಅವರೇ ಟ್ವೀಟ್‌ ಮಾಡಿದ್ದು, ಕೋವಿಡ್‌ ಸೋಂಕು ಬಂದಿರುವುದು ದೃಢಪಡಿಸಿದ್ದಾರೆ.

ಕೋವಿಡ್‌ ಪಾಸಿಟಿವ್‌ ಆದ ಎಚ್‌ಡಿಕೆಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ!

ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಮನವಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಪ್ರಸ್ತುತ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ