ಆ್ಯಪ್ನಗರ

ಕೊರೊನಾ ವಿಚಾರದಲ್ಲಿ ರಾಜಕಾರಣ ಬೇಡ - ಬಸವರಾಜ ಬೊಮ್ಮಾಯಿ ಮನವಿ

ರಾಜ್ಯಪಾಲರು ಕೊರೊನಾ ವಿಚಾರದಲ್ಲಿ ಕರೆದಿರುವ ಸಭೆಯನ್ನು ರಾಜ್ಯಪಾಲರ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಹೋಲಿಕೆ ಮಾಡಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Agencies 20 Apr 2021, 4:29 pm

ಹೈಲೈಟ್ಸ್‌:

  • ಕೊರೊನಾ ವಿಚಾರದಲ್ಲಿ ರಾಜ್ಯಪಾಲರು ಕರೆದಿರುವ ಸಭೆಯನ್ನು ರಾಜ್ಯಪಾಲರ ಆಡಳಿತಕ್ಕೆ ಹೋಲಿಕೆ ಮಾಡುವುದು ಸರಿಯಲ್ಲ ಎಂದ ಬಸವರಾಜ್‌ ಬೊಮ್ಮಾಯಿ
  • ರಾಜ್ಯದಲ್ಲಿ ಚುನಾಯಿತ ಸರಕಾರ ಇದ್ದಾಗ ಈ ರೀತಿ ಹೇಳಿಕೆ ನೀಡುವುದು ಎಷ್ಟರಮಟ್ಟಿಗೆ ಸಮಂಜಸ ಎಂದ ಬೊಮ್ಮಾಯಿ
  • ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಜ್ಯಪಾಲರ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಸಭೆ ಏರ್ಪಡಿಸಲಾಗಿದೆ ಎಂದ ಸಚಿವರು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web basavaraj bommai
ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ (ಸಂಗ್ರಹ ಚಿತ್ರ)
ಬೆಂಗಳೂರು: ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದರು.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, "ರಾಜ್ಯಪಾಲರು ಕೋವಿಡ್ ವಿಚಾರದಲ್ಲಿ ಕರೆದಿರುವ ಸಭೆಯನ್ನು ರಾಜ್ಯಪಾಲರ ಆಡಳಿತಕ್ಕೆ ಡಿಕೆ ಶಿವಕುಮಾರ್ ಹೋಲಿಕೆ ಮಾಡಿ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರು. ರಾಜ್ಯದಲ್ಲಿ ಚುನಾಯಿತ ಸರಕಾರ ಇದ್ದಾಗ ಈ ರೀತಿ ಹೇಳಿಕೆ ನೀಡುವುದು ಎಷ್ಟರಮಟ್ಟಿಗೆ ಸಮಂಜಸ," ಎಂದು ಬೊಮ್ಮಾಯಿ ಪ್ರಶ್ನಿಸಿದರು.

ರಾಜ್ಯಪಾಲರು ಯಾವ ಆಧಾರದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ? ಡಿ.ಕೆ. ಶಿವಕುಮಾರ್ ಪ್ರಶ್ನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಜ್ಯಪಾಲರ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಸಭೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿಗಳು, ಪ್ರತಿಪಕ್ಷಗಳ ನಾಯಕರು, ಉಭಯ ಸದನಗಳ ಮುಖಂಡರು ಭಾಗವಹಿಸಲಿದ್ದಾರೆ. ಪ್ರಧಾನ ಮಂತ್ರಿಗಳು ಎಲ್ಲ ರಾಜ್ಯಗಳ ರಾಜ್ಯಪಾಲರ ಜತೆಗೂ ಮಾತನಾಡಿದ್ದಾರೆ. ಮಹಾರಾಷ್ಟ್ರ ಮತ್ತು ರಾಜಸ್ಥಾನ ರಾಜ್ಯಗಳ ರಾಜ್ಯಪಾಲರ ಜತೆಗೂ ಮಾತಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರಕಾರ ಮತ್ತು ಪ್ರತಿಪಕ್ಷದವರ ಜೊತೆ ಮಾತನಾಡಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ಕೊರೊನಾವನ್ನು ಎದುರಿಸಿ ಎಂದು ಸಲಹೆ ನೀಡಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇದೆ. ಅಲ್ಲಿಯ ರಾಜ್ಯಪಾಲರು ಸಭೆ ನಡೆಸಿದರೆ ಅಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿದೆ ಎಂದು ಹೇಳುವುದಕ್ಕೆ ಆಗುತ್ತಾ ? ಮಹಾರಾಷ್ಟ್ರದಲ್ಲಿ ಸಮಿಶ್ರ ಸರಕಾರ ಅಧಿಕಾರದಲ್ಲಿದೆ. ಅಲ್ಲಿನ ರಾಜ್ಯಪಾಲರು ಸಭೆ ನಡೆಸಿದರೆ ಅಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬರಲು ಸಾಧ್ಯವೇ? ಹೀಗಾಗಿ ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ರಾಜಕಾರಣ ಮಾಡುವುದು ಮಾಡುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದರು.

ಕೋವಿಡ್‌ನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಚರ್ಚೆ ಮಾಡಬೇಕು. ಅದು ಬಿಟ್ಟು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು. ಇದನ್ನು ಡಿಕೆ ಶಿವಕುಮಾರ್ ಅರ್ಥಮಾಡಿಕೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ಎರಡನೆಯ ಅಲೆ ಅತಿ ವೇಗವಾಗಿ ಹರಡುತ್ತಿದೆ. ಕೇವಲ ಮೂರು ವಾರಗಳಲ್ಲಿ ಅತಿ ವೇಗವಾಗಿ ಹರಡಿದೆ.
ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಎದುರಾಗಿದೆ. ಅದರೆ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬೆಂಗಳೂರಿನಲ್ಲಿ ಸಮಸ್ಯೆ ಇದೆ. ಎಲ್ಲರೂ ಸೇರಿ ಕೆಲಸ ಮಾಡಿದರೂ ಕೋವಿಡ್ ಎದುರಿಸುವುದು ಕಷ್ಟ ಸಾಧ್ಯ ಎಂಬ ಪರಿಸ್ಥಿತಿ ಇರುವಾಗ ನೀವು ಇದರಲ್ಲಿ ತಪ್ಪು ಕಂಡುಹಿಡಿಯುವುದಕ್ಕೆ ಹೋಗಬೇಡಿ. ಒಟ್ಟಾರೆ ಕೋವಿಡ್ ನಿಯಂತ್ರಿಸುವಲ್ಲಿ ಸಫಲತೆ ಕಾಣಬೇಕಾದರೆ ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸಾಧ್ಯ ಎಂದು ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ