ಆ್ಯಪ್ನಗರ

HD Kumaraswamy, HDD ವಿರುದ್ಧ ಮಾತನಾಡುವಂತಿಲ್ಲ: ಕಾರ್ಯಕರ್ತರಲ್ಲಿ ಸಿದ್ದರಾಮಯ್ಯ ಮನವಿ

ಮೈತ್ರಿ ಸರಕಾರಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ 14 ಶಾಸಕರು ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದಾರೆ.

Vijaya Karnataka Web 8 Jul 2019, 8:25 am
ಬೆಂಗಳೂರು: ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಜೆಡಿಎಸ್‌-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಉಳಿಸಿಕೊಳ್ಳಲು ಲಭ್ಯವಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುವ ಲೆಕ್ಕಾಚಾರದಲ್ಲಿ ನಿರತವಾಗಿದೆ.
Vijaya Karnataka Web siddaramaiah


ಏತನ್ಮಧ್ಯೆ, 'ಮೈತ್ರಿ ಸರ್ಕಾರ, ಮುಖ್ಯಮಂತ್ರಿ ಇಲ್ಲವೇ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದೆಂದು ನಮ್ಮ‌ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ. ಮೈತ್ರಿಭಂಗಕ್ಕಾಗಿ ವಿರೋಧಿಗಳು ಹುಟ್ಟುಹಾಕುತ್ತಿರುವ ಜಗಳದ ಗಾಳಿ ಸುದ್ದಿಗಳ ಬಗ್ಗೆ ಎಚ್ಚರಿಕೆಯಿಂದಿರಿ' ಎಂದು ಸಮನ್ವಸ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಮನವಲಿಕೆ ಕಸರತ್ತು ಮುಂದುವರೆಸಿರುವ ಕೈ ಪಡೆ

ಅತೃಪ್ತ ಶಾಸಕರ ಮನವೊಲಿಸುವ ಕಸರತ್ತು ಮುಂದುವರೆಸಿರುವ ಕಾಂಗ್ರೆಸ್ ಹೈಕಮಾಂಡ್, ಬೆಂಗಳೂರಿನಲ್ಲೆ ಟೆಂಟ್ ಹಾಕುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ