ಆ್ಯಪ್ನಗರ

ಕುಡಿಯುವ ನೀರಿನ ಸಮಸ್ಯೆ ಪರಾಮರ್ಶೆಗೆ ನಿರ್ಬಂಧ: ಸಚಿವ ಸಿಡಿಮಿಡಿ

ರಾಜ್ಯದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಒಗಳ ಸಭೆ ನಡೆಸಲು ಚುನಾವಣಾ ಆಯೋಗ ಅವಕಾಶ ...

Vijaya Karnataka 27 Apr 2019, 5:00 am
ಬೆಂಗಳೂರು: ರಾಜ್ಯದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಒಗಳ ಸಭೆ ನಡೆಸಲು ಚುನಾವಣಾ ಆಯೋಗ ಅವಕಾಶ ನೀಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್‌ ಸಚಿವ ಕೃಷ್ಣಬೈರೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web congress- krishnabyregowda


''ಹಲವು ತಾಲೂಕುಗಳಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದೆ. ಇಂತಹ ಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವನಾಗಿ ನಾನು ನನ್ನ ಜವಾಬ್ದಾರಿ ನಿರ್ವಹಿಸಬಾರದೇ? ಕುಡಿಯುವ ನೀರು ಪೂರೈಕೆ ಮತ್ತು ಉದ್ಯೋಗ ಸೃಜನೆ ಕಾರ್ಯಕ್ರಮಗಳ ಕುರಿತಂತೆ ಸಿಇಒಗಳೊಂದಿಗೆ ಸಭೆ ನಡೆಸಬಾರದೇ'' ಎಂದು ಪ್ರಶ್ನಿಸಿ ಟ್ವೀಟ್‌ ಮಾಡಿದ್ದಾರೆ.

''ರಾಜ್ಯದಲ್ಲಿ ಚುನಾವಣೆ ಮುಗಿದುಹೋಗಿದೆ. ಹೀಗಿದ್ದರೂ, ಉತ್ತಮ ಆಡಳಿತ ಹಾಗೂ ನಾಗರಿಕರ ಹಿತಾಸಕ್ತಿ ಕಾಯುವ ಜವಾಬ್ದಾರಿ ನಿರ್ವಹಣೆಗೆ ಚುನಾಯಿತ ಸರಕಾರಕ್ಕೆ ಅವಕಾಶ ನಿರಾಕರಣೆ ಎಷ್ಟರ ಮಟ್ಟಿಗೆ ಸರಿ'' ಎಂದು ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಕಳೆದ ಶನಿವಾರ (ಏ.20) ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಚಿವರು ಸಭೆ ನಡೆಸಿದ್ದರು. ಬಳಿಕ, ಜಿಲ್ಲಾವಾರು ಪ್ರಗತಿ ಪರಿಶೀಲನೆ ನಡೆಸಲು ಬಯಸಿದ್ದರು. ಈ ಉದ್ದೇಶಕ್ಕೆ ಚುನಾವಣಾ ಆಯೋಗ ಅವಕಾಶ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಸಚಿವರು ಗುರುವಾರ ಸ್ವಂತ ಮತಕ್ಷೇತ್ರ ಬ್ಯಾಟರಾಯನಪುರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಸಂಬಂಧ ಬೆಂಗಳೂರು ಜಲಮಂಡಳಿ ಅಧಿಕಾರಿಗಳ ಸಭೆಗೆ ಸೀಮಿತವಾಗಿ ಉಳಿದರು.

============================

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ