ಆ್ಯಪ್ನಗರ

ರಾಜ್ಯದೆಲ್ಲೆಡೆ ಬರ, ನೀರಿಗೆ ತತ್ವಾರ, ಟ್ಯಾಂಕರ್‌ನಲ್ಲೂ ನೀರು ಪೂರೈಸದ ಸರಕಾರ: ಬಿಎಸ್‌ವೈ ದೂರು

ರಾಜ್ಯಾದ್ಯಂತ ತೀವ್ರ ಬರಪರಿಸ್ಥಿತಿ ಇದ್ದು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದ್ದ ರಾಜ್ಯ ಸರಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ದೂರಿದರು.

Vijaya Karnataka Web 7 May 2019, 4:17 pm
ಬೆಂಗಳೂರು: ರಾಜ್ಯದ ಎಲ್ಲಡೆಗೆ ಬಿಸಿಲಿನ ಝಳ ಹೆಚ್ಚಾಗಿದೆ. ಹಲವಾರು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಜೋರಾಗಿದೆ. ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಇಂಥ ಪರಿಸ್ಥಿತಿಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರಕಾರ ಯಾವುದೇ ಕ್ರಮಕ್ಕೂ ಮುಂದಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದ್ದಾರೆ.
Vijaya Karnataka Web ಬಿಎಸ್‌ವೈ
ಬಿಎಸ್‌ವೈ


ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯಾದ್ಯಂತ ತೀವ್ರ ಬರಪರಿಸ್ಥಿತಿ ಇದ್ದು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದ್ದ ರಾಜ್ಯ ಸರಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ದೂರಿದರು.

ಬರ ಪರಿಹಾರಕ್ಕೆ ಕೇಂದ್ರ ಸರಕಾರ ಎಲ್ಲಾ ರೀತಿಯ ನೆರವು ನೀಡಿದೆ. ಆದರೆ ರಾಜ್ಯ ಸರಕಾರ ಕ್ರಮ ಕೈಗೊಳ್ಳಲು ಉದಾಸೀನ ತೋರುತ್ತಿದೆ ಎಂದು ಬಿಎಸ್‌ವೈ ಆರೋಪಿಸಿದರು.

ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಿದೆ. ರಾಜ್ಯ ಸರಕಾರ ಕನಿಷ್ಠ ಪಕ್ಷ ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳು ಕೂಡ ಪರಿಹಾರ ಕಾಮಗಾರಿ ಕೈಗೊಂಡಿಲ್ಲ. ಇನ್ನೆರಡು ದಿನಗಳಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಪ್ರಾರಂಭಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ