ಆ್ಯಪ್ನಗರ

ಕೊರೊನಾ ಭೀತಿ: ವಿಧಾನ ಪರಿಷತ್‌ನ 4 ಸ್ಥಾನಗಳ ಚುನಾವಣೆ ಮುಂದೂಡಿಕೆ

ಕೊರೊನಾ ವೈರಸ್‌ ಹಿನ್ನೆಲೆ ಇದೇ ತಿಂಗಳಲ್ಲಿ ನಡೆಯಬೇಕಾಗಿದ್ದ ಪರಿಷತ್‌ ಚುನಾವಣೆ ಮುಂದೂಡಲಾಗಿದೆ. ಪದವೀಧರರ ಕ್ಷೇತ್ರದ ಹಾಗೂ ಶಿಕ್ಷಕರ ಕ್ಷೇತ್ರದ ತಲಾ 2 ಸ್ಥಾನಗಳ ಚುನಾವಣೆಯನ್ನು ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

Vijaya Karnataka Web 8 Jun 2020, 9:02 pm
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಡೆಯಬೇಕಾಗಿದ್ದ ಚುನಾವಣೆಯನ್ನು ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಬೇಡ ಎಂದು ಆಯೋಗ ಈ ತೀರ್ಮಾನಕ್ಕೆ ಬಂದಿದೆ.
Vijaya Karnataka Web Soudha
ರಾಜ್ಯ ವಿಧಾನ ಪರಿಷತ್‌ನ 4 ಸ್ಥಾನಗಳ ಚುನಾವಣೆ ಮುಂದೂಡಿಕೆ


ಜೂನ್ 30ಕ್ಕೆ 2 ಪದವೀಧರ ಕ್ಷೇತ್ರ ಹಾಗೂ 2 ಶಿಕ್ಷಕರ ಕ್ಷೇತ್ರದ ಪರಿಷತ್ ಸ್ಥಾನಗಳ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿದೆ. ಹಾಲಿ ಸದಸ್ಯರ ಅಧಿಕಾರಾವಧಿ ಮುಗಿಯುವ ಒಳಗಡೆ ಚುನಾವಣೆ ನಡೆಸಬೇಕಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಪರಿಷತ್‌ ಎಲೆಕ್ಷನ್‌ನ್ನು ಮುಂದೂಡಲಾಗಿದೆ.

ಚುನಾವಣಾ ಮುಂದೂಡಿ ಆದೇಶ ಹೊರಡಿಸಿರುವ ಚುನಾವಣಾ ಆಯೋಗ, ಕೇಂದ್ರ ಸರಕಾರ ಲಾಕ್‌ಡೌನ್‌ನ್ನು ಜೂನ್ 30, 2020ರವರೆಗೆ ವಿಸ್ತರಿಸಿದೆ. ಇದರ ಜೊತೆ ಹೆಚ್ಚಿನ ಜನ ಸೇರುವುದಕ್ಕೂ ಕೂಡ ನಿರ್ಬಂಧ ವಿಧಿಸಲಾಗಿದೆ. ಚುನಾವಣೆ ಘೋಷಿಸಿದರೆ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಲಿದ್ದು, ಪ್ರಚಾರದಲ್ಲಿ ಅಭ್ಯರ್ಥಿಗಳು ಮತದಾರರೊಂದಿಗೆ ಮಾತನಾಡಬೇಕಾಗುತ್ತದೆ ಎಂದು ಚುನಾವಣೆ ಮುಂದೂಡಲಾಗಿದೆ.

ಕೊರೊನಾ ಹಿನ್ನಲೆ, ಗ್ರಾಮ ಪಂಚಾಯತ್‌ ಚುನಾವಣೆ ಮುಂದೂಡಿಕೆ

ಚುನಾವಣೆ ಮುಂದೂಡಿ ಆಯೋಗದ ಆದೇಶ


ಮತದಾನ ಪ್ರಕ್ರಿಯೆಯಲ್ಲೂ ಹೆಚ್ಚಿನ ಜನ ಸೇರುವ ದೃಷ್ಟಿಯಿಂದ ಆಯೋಗ ಈ ನಿರ್ಧಾರ ಕೈಗೊಂಡಿದೆ. ಇದಕ್ಕೂ ಮೊದಲು ಜುಲೈ ಹಾಗೂ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಗ್ರಾಮ ಪಂಚಾಯತಿ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಿತ್ತು. ಇನ್ನು, ಇದೇ ಅವಧಿಯಲ್ಲಿ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆಯೂ ಕೂಡ ಭಾಗಶಃ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಅಧಿಕೃತ ಆದೇಶ ಬಾಕಿ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ