ಆ್ಯಪ್ನಗರ

ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ಕ್ರಮಗಳ ಜಾರಿಗೆ ಒತ್ತು ಕೊಡಿ - ಅಧಿಕಾರಿಗಳಿಗೆ ಶೆಟ್ಟರ್‌ ಸೂಚನೆ

ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಕರ್ನಾಟಕ ಉದ್ಯೋಗ ಮಿತ್ರ ಹಾಗೂ ಇನ್ನಿತರೆ ಪ್ರಮುಖ ಮುಖ್ಯ ಕಚೇರಿಗಳ ಪ್ರಾದೇಶಿಕ ಕಚೇರಿಗಳನ್ನು ಉತ್ತರ ಕರ್ನಾಟಕ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಪ್ರಾರಂಭಿಸುವ ನಿಟ್ಟಿನಲ್ಲಿ ಚಿಂತನೆ ಪ್ರಾರಂಭಿಸುವಂತೆಯೂ ಜಗದೀಶ್‌ ಶೆಟ್ಟರ್‌ ತಿಳಿಸಿದರು.

Vijaya Karnataka 10 Jul 2020, 8:49 pm
ಬೆಂಗಳೂರು: 'ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌' ಉಪಕ್ರಮಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಸೂಚಿಸಿದ್ದಾರೆ.
Vijaya Karnataka Web Jagadish Shettar


ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಉದ್ಯೋಗ ಮಿತ್ರದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ''ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ಉಪಕ್ರಮಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೂಡಾ ಅನುಷ್ಠಾನಗೊಳ್ಳಬೇಕಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆಯದೇ ಆದಂತಹ ಹಲವಾರು ಅನುಮತಿ ಪತ್ರಗಳು ಹಾಗೂ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಇದು ಕೈಗಾರಿಕೋದ್ಯಮಿಗಳಲ್ಲಿ ಕೆಲವು ಗೊಂದಲಗಳನ್ನು ಉಂಟುಮಾಡುತ್ತಿವೆ. ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ನ ಉಪಕ್ರಮಗಳ ಪ್ರಾಮಾಣಿಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ,'' ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೈಗಾರಿಕಾ ಹೆಲ್ಪ್‌ ಲೈನ್‌

"ರಾಜ್ಯಾದ್ಯಂತ ಕೈಗಾರಿಕೋದ್ಯಮಿಗಳು ಎದುರಿಸುವ ಸಮಸ್ಯೆಗಳಿಗೆ ಈಗಾಗಲೇ ಇರುವ ಸುಲಭ ಪರಿಹಾರಗಳ ಮಾಹಿತಿಗಳು ಸಾರ್ವಜನಿಕರಿಗೆ ತಲುಪುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ಒಂದು ಹೆಲ್ಪ್‌ ಲೈನ್‌ ಪ್ರಾರಂಭಿಸಬೇಕು," ಎಂದು ಸೂಚಿಸಿದರು.

ಪ್ರಾದೇಶಿಕ ಕಚೇರಿಗಳ ಬಗ್ಗೆ ಚಿಂತನೆ

ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಕರ್ನಾಟಕ ಉದ್ಯೋಗ ಮಿತ್ರ ಹಾಗೂ ಇನ್ನಿತರೆ ಪ್ರಮುಖ ಮುಖ್ಯ ಕಚೇರಿಗಳ ಪ್ರಾದೇಶಿಕ ಕಚೇರಿಗಳನ್ನು ಉತ್ತರ ಕರ್ನಾಟಕ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಪ್ರಾರಂಭಿಸುವ ನಿಟ್ಟಿನಲ್ಲಿ ಚಿಂತನೆ ಪ್ರಾರಂಭಿಸುವಂತೆ ತಿಳಿಸಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾಭಿವೃದ್ಧಿ ಆಯುಕ್ತೆ ಗುಂಜನ್‌ ಕೃಷ್ಣಾ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಕೆಐಎಡಿಬಿ ಸಿಇಒ ಡಾ. ಶಿವಶಂಕರ್‌ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ