ಆ್ಯಪ್ನಗರ

ಆರತಿ ತಟ್ಟೆಗೆ ಕಾಣಿಕೆ ಪ್ರಕರಣದಲ್ಲಿ ಈಶ್ವರಪ್ಪ ಖುಲಾಸೆ

ಮತ ಚಲಾಯಿಸುವಂತೆ ಅಮಿಷ ಒಡ್ಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಲಾಗಿದೆ.

Vijaya Karnataka Web 30 Sep 2018, 8:05 am
ಬೆಂಗಳೂರು: ವಿಧಾನಸಭೆ ಚುನಾವಣೆ-2013ರಲ್ಲಿ ಆರತಿ ತಟ್ಟೆಗೆ ಕಾಣಿಕೆ ಹಾಕಿ ತಮಗೆ ಮತ ಚಲಾಯಿಸುವಂತೆ ಅಮಿಷ ಒಡ್ಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.
Vijaya Karnataka Web Eshwarappa


ಶಿವಮೊಗ್ಗದಿಂದ ಸ್ಪರ್ಧಿಸಿದ್ದ ಈಶ್ವರಪ್ಪ, 2013ರ ಏ.22ರಂದು ಶಿವಮೊಗ್ಗದಲ್ಲಿ ಪ್ರಚಾರ ಮಾಡುವಾಗ ಆರತಿ ತಟ್ಟೆಗೆ ಕಾಣಿಕೆ ಹಾಕಿದ್ದರು. ಇದರ ವೀಡೀಯೊ ಕ್ಲಿಪ್ಪಿಂಗ್‌ ಆಧರಿಸಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿತ್ತು. 2014ರಿಂದ 2018ರ ನಡುವೆ ನಾಲ್ಕು ವರ್ಷಗಳ ಕಾಲ ವಿಚಾರಣೆ ನಡೆದು, ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ