ಆ್ಯಪ್ನಗರ

ಅಖಂಡ ಶ್ರೀನಿವಾಸ್ ದಲಿತನೆಂದ ಬಿ.ಎಲ್‌.ಸಂತೋಷ್‌ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..!

ಸಿದ್ದರಾಮಯ್ಯ ಅವರು ಬಿಎಲ್‌ ಸಂತೋಷ್ ವಿರುದ್ಧ ಕಿಡಿಕಾರಲು ಕಾರಣ, ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ದಲಿತ ಶಾಸಕ ಅಂದಿರೋದು. ಇತ್ತೀಚೆಗೆ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ದುರುಳರ ಅಟ್ಟಹಾಸವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಬಿಎಲ್‌ ಸಂತೋಷ್, ಕಾಂಗ್ರೆಸ್‌ ವಿರುದ್ಧವೂ ಹರಿಹಾಯ್ದಿದ್ದರು. ಇದಕ್ಕೆ ಖಡಕ್ ಆಗಿಯೇ ಠಕ್ಕರ್ ಕೊಟ್ಟಿರುವ ಸಿದ್ದರಾಮಯ್ಯ, ಬಿಎಲ್‌ ಸಂತೋಷ್ ವಿರುದ್ಧ ಟ್ವಿಟರ್‌ನಲ್ಲಿ ಸಮರ ಸಾರಿದ್ದಾರೆ.

Vijaya Karnataka Web 14 Aug 2020, 8:55 am
ಬೆಂಗಳೂರು: ಸಿದ್ದರಾಮಯ್ಯ ಕೊರೊನಾದಿಂದ ಗುಣಮುಖರಾಗಿ ನಿನ್ನೆಯಷ್ಟೇ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಬಿಜೆಪಿಯ ವಿರುದ್ಧ ರಾಜ್ಯದಲ್ಲಿ ಖಡಕ್ ಆಗಿ ಮಾತನಾಡೋ ಪವರ್‌ಫುಲ್ ನಾಯಕರ ಸಿದ್ದರಾಮಯ್ಯ ಅಗ್ರಗಣ್ಯರು. ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ ಬಿಜೆಪಿ ರಾ‍ಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್ ವಿರುದ್ಧ ಟ್ವೀಟ್‌ ವಾರ್ ಆರಂಭಿಸಿದ್ದಾರೆ.
Vijaya Karnataka Web Siddaramaiah


ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಸರ್ಕಾರ ಅಸ್ತಿತ್ವದಲ್ಲಿದೆಯೇ? :

ಸಿದ್ದರಾಮಯ್ಯ ಅವರು ಬಿಎಲ್‌ ಸಂತೋಷ್ ವಿರುದ್ಧ ಕಿಡಿಕಾರಲು ಕಾರಣ, ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ದಲಿತ ಶಾಸಕ ಅಂದಿರೋದು. ಇತ್ತೀಚೆಗೆ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ದುರುಳರ ಅಟ್ಟಹಾಸವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಬಿಎಲ್‌ ಸಂತೋಷ್, ಕಾಂಗ್ರೆಸ್‌ ವಿರುದ್ಧವೂ ಹರಿಹಾಯ್ದಿದ್ದರು. ಇದಕ್ಕೆ ಖಡಕ್ ಆಗಿಯೇ ಠಕ್ಕರ್ ಕೊಟ್ಟಿರುವ ಸಿದ್ದರಾಮಯ್ಯ, ಬಿಎಲ್‌ ಸಂತೋಷ್ ವಿರುದ್ಧ ಟ್ವಿಟರ್‌ನಲ್ಲಿ ಸಮರ ಸಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಿಎಲ್‌ ಸಂತೋಷ್ ಅವರು 'ಹಿಂದುತ್ವ'ದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ. 'ಹಿಂದು-ಒಂದು' ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ, ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ ಕರೆಯೋಣವೇ? ಎಂದು ಕಿಡಿಕಾರಿದ್ದಾರೆ.

'ನಳಿನ್ ಕುಮಾರ್ ಅವ್ರೇ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ' :

ಅಲ್ಲದೇ, ರಾಜ್ಯದಲ್ಲಿ ನಿಮ್ಮದೇ ಪಕ್ಷ‌ ಅಧಿಕಾರದಲ್ಲಿರುವಾಗ ಒಬ್ಬ ದಲಿತ ಶಾಸಕನ ಮನೆಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗಿಲ್ಲ, ಇನ್ನು ಕೋಟ್ಯಂತರ ಸಂಖ್ಯೆಯ ಬಡ-ಅಸಹಾಯಕ ದಲಿತರ ಮನೆಗಳಿಗೆ ರಕ್ಷಣೆ ನೀಡಲು ಹೇಗೆ ಸಾಧ್ಯ? ಇದು ತಲೆತಗ್ಗಿಸುವಂತಹ ವೈಫಲ್ಯ ಎಂದು ನಿಮಗನಿಸುವುದಿಲ್ಲವೇ ಬಿಎಲ್‌ ಸಂತೋಷ್ ಅವರೇ ಎಂದು ಹೀಯಾಳಿಸಿದ್ದಾರೆ. ಮುಂದುವರಿದು ಅವರು, ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ. ಸತ್ತ ದನದ ಚರ್ಮ ಸುಲಿದಿದ್ದಕ್ಕೆ, ಗೋಮಾಂಸ ತಿಂದಿದ್ದಕ್ಕೆ, ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ, ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ. ದಲಿತರ ಬೆನ್ನತ್ತಿ ಹಿಂಸಿಸಿ, ಸಾಯಿಸಿದ್ದು ಯಾರ ಆಡಳಿತದಲ್ಲಿ ಬಿಎಲ್‌ ಸಂತೋಷ್ ಅವ್ರೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ಗೆದ್ದ ಸಿದ್ದರಾಮಯ್ಯ ; ಆಸ್ಪತ್ರೆಯಿಂದ ಬಿಡುಗಡೆಯಾಗ್ತಿದ್ದಂತೆ ಎಲ್ಲರಿಗೂ

ಇನ್ನು ದಲಿತರು ನಾಯಿಗಳೆಂದು ತುಚ್ಛೀಕರಿಸಿದವರು, ಮೀಸಲಾತಿಯನ್ನು ವಿರೋಧಿಸುತ್ತಿರುವವರು, ಸಂವಿಧಾನವನ್ನು ಬದಲಾಯಿಸಬೇಕೆನ್ನುವವರು, ಡಾ.ಅಂಬೇಡ್ಕರ್ ಅವರನ್ನು ಅವಮಾನಿಸುವವರು ಯಾವ ಪಕ್ಷದವರು ಬಿಎಲ್‌ ಸಂತೋಷ್ ಅವರೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಇಂತಹ ಮನುಷ್ಯ ವಿರೋಧಿಗಳ ವಿರುದ್ಧ ನಿಮ್ಮ ಪಕ್ಷವೇನಾದರೂ ಕ್ರಮ ಕೈಗೊಂಡಿದೆಯೇ? ಎಂದು ಕೇಳಿದ್ದೀರಿ. ಅಲ್ಲದೇ ನಿಮ್ಮ ಕಾಲದಲ್ಲಿ ದಲಿತರ ಹತ್ಯೆ/ದೌರ್ಜನ್ಯ ದುಪ್ಪಟ್ಟಾಗಿದೆ ಎಂದು ರಾಷ್ಟ್ರೀಯ ಅಪರಾಧ ದಳದ ವರದಿ ಹೇಳುತ್ತಿದೆ. ಹೀಗಿದ್ದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತೀರಿ. ಇದು ನಿಮ್ಮ ದಲಿತರ ಮೇಲಿನ ಕಾಳಜಿಯಲ್ಲವೇ ಬಿಎಲ್‌ ಸಂತೋಷ್ ಅವರೇ? ಎಂದು ಖಡಕ್ ಆಗಿ ಕೇಳಿದ್ದಾರೆ.


ಸಿಎಂ ಯಡಿಯೂರಪ್ಪ ಖಡಕ್‌ ಎಚ್ಚರಿಕೆ..! ಬೇಡ ಎನ್ನುತ್ತಲೇ ನಿಗಮ, ಮಂಡಳಿ ಖುರ್ಚಿ ಹಿಡಿದ ಶಾಸಕರು

ಇದರ ಜೊತೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಎಸ್‌ಸಿ ಪಿ-ಟಿಎಸ್‌ಪಿ ಯೋಜನೆಗೆ ನೀಡಿದ್ದ ಹಣ ರೂ.22,161 ಕೋಟಿ ಮಾತ್ರ. ನಮ್ಮ ಸರ್ಕಾರದ 5 ವರ್ಷಗಳಲ್ಲಿ ನೀಡಿದ್ದ ಹಣ ರೂ.88, 395 ಕೋಟಿ. ನರೇಂದ್ರ ಮೋದಿ ಅವರಿಗೆ ಹೇಳಿ ಈ ಯೋಜನೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರ್ತೀರಾ ಬಿಎಲ್‌ ಸಂತೋಷ್ ಅವರೇ ಎಂದು ಪ್ರಶ್ನಿಸಿರುವ ಅವರು, ದಿವಂಗತ ಬಂಗಾರು ಲಕ್ಷ್ಮಣ್ ಅವರನ್ನು ನಿಮ್ಮ ಪಕ್ಷದ ಏಕೈಕ ಭ್ರಷ್ಟನೆಂಬ ರೀತಿಯಲ್ಲಿ ಬಲಿಗೊಟ್ಟಿದ್ದು ಯಾರು‌ ಬಿಎಲ್‌ ಸಂತೋಷ್ ಅವರೇ? ದಲಿತರು ಜಾಗೃತರಾಗಿದ್ದಾರೆ, ಹಿತೈಷಿಗಳು ಯಾರು? ಹಿತಶತ್ರುಗಳು ಯಾರು ಎನ್ನುವುದು ಅವರಿಗೆ ಗೊತ್ತಿದೆ. ಉರಿಯುವ ಮನೆಯಲ್ಲಿ ಗಳ ಇರಿಯುವ ಕೆಲಸ ಮಾಡ್ಬೇಡಿ ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ