ಆ್ಯಪ್ನಗರ

ಕರಾವಳಿಯಲ್ಲಿ ಸೆ.2 ಮತ್ತು 3ಕ್ಕೆ ಭಾರಿ ಮಳೆ ನಿರೀಕ್ಷೆ: 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋ‍‍‍‍ಷಣೆ

ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸೆ.1 ಮತ್ತು 2ರಂದು 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Vijaya Karnataka Web 31 Aug 2020, 7:09 am
ಬೆಂಗಳೂರು: ಕೆಲವು ದಿನಗಳ ಬಿಡುವಿನ ನಂತರ ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಸೆ.1, 2ರಂದು ಈ ಭಾಗದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
Vijaya Karnataka Web ಮಳೆ
ಸಾಂದರ್ಭಿಕ ಚಿತ್ರ


ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ/ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸೋಮವಾರ ಅಲ್ಲಲ್ಲಿ ಮಳೆಯಾಗಲಿದೆ. ಮಂಗಳವಾರ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.

ಕರಾವಳಿಗೆ ಮರಳಲಿದೆ ಮಳೆ ವೈಭವ
ನೈಋುತ್ಯ ಮುಂಗಾರು ಕರಾವಳಿ ಜಿಲ್ಲೆಯಲ್ಲಿ ದುರ್ಬಲಗೊಂಡಿದೆ. ಈಗ ನಿಧಾನವಾಗಿ ಚೇತರಿಕೆಯ ಹಾದಿ ಹಿಡಿದಿದೆ. ಇದರ ಪರಿಣಾಮ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೆ.2 ಹಾಗೂ 3ರಂದು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಕುಮಟಾದಲ್ಲಿ 80 ಮಿ.ಮೀ. ಮಳೆ
ಭಾನುವಾರ ಕುಮಟಾ ಹಾಗೂ ಶಿರಾಲಿಯಲ್ಲಿ ತಲಾ 80 ಮಿ.ಮೀ. ಮಳೆಯಾಗಿದೆ. ಅಂಕೋಲಾ, ಕದ್ರ, ಭಟ್ಕಳ, ಗೋಕರ್ಣದಲ್ಲಿ ತಲಾ 70, ಹೊನ್ನಾವರ 60, ಸುಬ್ರಹ್ಮಣ್ಯ, ಯಲ್ಲಾಪುರ, ಆಗುಂಬೆಯಲ್ಲಿ ತಲಾ 50, ಕಾರವಾರದಲ್ಲಿ40, ಕೋಟಾ, ಮಡಿಕೇರಿ ತಲಾ 30, ಪಣಂಬೂರು, ಬೆಳಗಾವಿ, ಬಾಗಲಕೋಟ ತಲಾ 20, ಮೂಡಬಿದಿರೆ, ಮೂಲ್ಕಿ, ಹಳಿಯಾಳ, ಭಾಗಮಂಡಲ, ಕಮ್ಮರಡಿಯಲ್ಲಿ ತಲಾ 10 ಮಿ.ಮೀ.ನಷ್ಟು ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ