ಆ್ಯಪ್ನಗರ

ಹಬ್ಬದ ಪ್ರಯುಕ್ತ 1200 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ

Vijaya Karnataka 7 Sep 2018, 9:45 pm
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸೆ. 11, 12ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ನಾನಾ ಪ್ರದೇಶಗಳಿಗೆ ಹೆಚ್ಚುವರಿಯಾಗಿ 1200ಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
Vijaya Karnataka Web ಕೆಎಸ್‌ಆರ್‌ಟಿಸಿ ಬಸ್‌
ಕೆಎಸ್‌ಆರ್‌ಟಿಸಿ ಬಸ್‌


ಸೆ. 16ರಂದು ರಾಜ್ಯ ಮತ್ತು ಹೊರರಾಜ್ಯದ ನಾನಾ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ಸಂಚರಿಸುತ್ತವೆ.

ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ ಮತ್ತಿತರ ಸ್ಥಳಗಳಿಗೆ ತೆರಳುವ ಪ್ರತಿಷ್ಠಿತ ಬಸ್‌ಗಳನ್ನು ಶಾಂತಿನಗರದಲ್ಲಿನ ಡಿಪೊ 2 ಮತ್ತು 3ರ ಮುಂಭಾಗದಿಂದ ಬಿಡಲಾಗುತ್ತದೆ.

ಬಸವೇಶ್ವರ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್‌ಬಿಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಸೇರಿದಂತೆ ಇತರೆ ಪ್ರದೇಶಗಳಿಗೆ ಹೆಚ್ಚುವರಿ ಬಸ್‌ಗಳನ್ನು ಬಿಡಲು ನಿರ್ಧರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ