ಆ್ಯಪ್ನಗರ

ದೇವದುರ್ಗದಲ್ಲಿ ಬಿಎಸ್‌ವೈ ಮೇಲೆ ಎಫ್‌ಐಆರ್‌

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಪರೇಷನ್‌ ಕಮಲದ ಆಡಿಯೊ ಸಂಭಾಷಣೆಗೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ನಗರದ ಠಾಣೆಯಲ್ಲಿ ಬುಧವಾರ ಎಫ್‌ಐಆರ್‌ ದಾಖಲಾಗಿದೆ.

Vijaya Karnataka 14 Feb 2019, 5:00 am
ದೇವದುರ್ಗ : ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಪರೇಷನ್‌ ಕಮಲದ ಆಡಿಯೊ ಸಂಭಾಷಣೆಗೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ನಗರದ ಠಾಣೆಯಲ್ಲಿ ಬುಧವಾರ ಎಫ್‌ಐಆರ್‌ ದಾಖಲಾಗಿದೆ.
Vijaya Karnataka Web f i r against yadiyurappa
ದೇವದುರ್ಗದಲ್ಲಿ ಬಿಎಸ್‌ವೈ ಮೇಲೆ ಎಫ್‌ಐಆರ್‌


ಗುರುಮಠಕಲ್‌ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ಕಂದಕೂರು ನೀಡಿದ ದೂರು ಆಧರಿಸಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, 2ನೇ ಆರೋಪಿಯಾಗಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ, 3ನೇ ಆರೋಪಿಯಾಗಿ ಹಾಸನ ಶಾಸಕ ಪ್ರೀತಂಗೌಡ ಹಾಗೂ ಪತ್ರಕರ್ತ ಮರಂಕಲ್‌ ಅವರನ್ನು ನಾಲ್ಕನೇ ಆರೋಪಿಯನ್ನಾಗಿಸಲಾಗಿದೆ. ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆ, ಐಪಿಸಿ 120 ಬಿ, 506, ಆರ್‌/ವಿ 34 ಐಪಿಸಿ ಪ್ರಕರಣಗಳಡಿ ಪ್ರಕರಣ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ