ಆ್ಯಪ್ನಗರ

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಜೈರಾಜ್‌ ಅವಿರೋಧ ಆಯ್ಕೆ

ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಜೈರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ...

Vijaya Karnataka Web 23 Jun 2019, 5:00 am
ಬೆಂಗಳೂರು: ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಜೈರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Vijaya Karnataka Web film chamber president jayaraj
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಜೈರಾಜ್‌ ಅವಿರೋಧ ಆಯ್ಕೆ


ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ನರಸಿಂಹಲು ಮತ್ತು ನಟ ಸುಂದರ್‌ರಾಜ್‌ ಅವರು ನಾಮಪತ್ರ ವಾಪಸ್‌ ಪಡೆದಿದ್ದರಿಂದ ಜೈರಾಜ್‌ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟರಮಣ ಕೂಡ ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಗೌರವ ಕಾರ್ಯದರ್ಶಿ ಸ್ಥಾನಕ್ಕೆ ವಿತರಕರ ವಲಯದಿಂದ ಎ.ಗಣೇಶ್‌, ಪ್ರದರ್ಶಕರ ವಲಯದ ಕಾರ್ಯದರ್ಶಿಯಾಗಿ ನರಸಿಂಹಲು ಆಯ್ಕೆಗೊಂಡರು. ನಿರ್ಮಾಪಕ ವಲಯದಿಂದ ಮಂಡಳಿಯ ಉಪಾಧ್ಯಕ್ಷ ಸ್ಥಾನದ ಚುನಾವಣೆ ರೇಸ್‌ನಲ್ಲಿ ಉಮೇಶ್‌ ಬಣಕಾರ್‌, ದಿನೇಶ್‌ ಗಾಂಧಿ, ಪ್ರಮೀಳಾ ಜೋಷಾಯಿ ಸ್ಪರ್ಧೆಯಲ್ಲಿದ್ದಾರೆ. ಜೂ.29ರಂದು ಚುನಾವಣೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ