ಆ್ಯಪ್ನಗರ

ಜ.15ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ

​​ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತು ಜಾಲತಾಣದಲ್ಲಿ ಹಾಗೂ ಸಂಬಂಧಿಸಿದ ಕಚೇರಿಯಲ್ಲಿ ಖಚಿತಪಡಿಸಿಕೊಳ್ಳಬೇಕು

Vijaya Karnataka 6 Jan 2019, 8:38 pm
ಬೆಂಗಳೂರು: ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಜ.16ರಂದು 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
Vijaya Karnataka Web election
ಸಾಂದರ್ಭಿಕ ಚಿತ್ರ


ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಪಟ್ಟಿ ಪ್ರಕಟಿಸಲಾಗುತ್ತದೆ. ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.

ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತು ಜಾಲತಾಣದಲ್ಲಿ ಹಾಗೂ ಸಂಬಂಧಿಸಿದ ಕಚೇರಿಯಲ್ಲಿ ಖಚಿತಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯ ನಂತರ ಹೊಸ ಸೇರ್ಪಡೆ, ತಿದ್ದುಪಡಿ ಮತ್ತು ಹೆಸರು ತೆಗೆದುಹಾಕುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ