ಆ್ಯಪ್ನಗರ

ಕ್ವಾರಂಟೈನ್‌ ನಿಯಮ ಉಲ್ಲಂಘನೆ: ಡ್ರೋನ್‌ ಪ್ರತಾಪ್‌ ವಿರುದ್ಧ ಎಫ್‌ಐಆರ್ ದಾಖಲು

ಡ್ರೋನ್ ಪ್ರತಾಪ್ ವಿರುದ್ಧ ಕೊರೊನಾವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ವೈದ್ಯೆ ಡಾ.ಪ್ರಜ್ಞಾ ಅವರು ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಾಗಿದೆ.

Vijaya Karnataka Web 20 Jul 2020, 8:02 am
ಬೆಂಗಳೂರು: ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ಆರೋಪದ ಮೇರೆಗೆ ಡ್ರೋನ್‌ ಪ್ರತಾಪ್‌ ವಿರುದ್ಧ ತಲಘಟ್ಟಪುರ ಠಾಣೆಯಲ್ಲಿಎಫ್‌ಐಆರ್‌ ದಾಖಲಾಗಿದೆ.
Vijaya Karnataka Web ಡ್ರೋನ್ ಪ್ರತಾಪ್


ವೈದ್ಯೆ ಡಾ.ಪ್ರಜ್ಞಾ ಅವರು ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಾಗಿದೆ. ''ಪ್ರತಾಪ್‌ ಕೈ ಮೇಲೆ ಹೋಮ್‌ ಕ್ವಾರಂಟೈನ್‌ ಸೀಲ್‌ ಹಾಕಲಾಗಿದೆ. ಆದರೂ ಅವರು ನಿಯಮ ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದು ಸಾರ್ವಜನಿಕವಾಗಿ ಓಡಾಡಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು,'' ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರತಾಪ್‌ ನಾಪತ್ತೆಎಫ್‌ಐಆರ್‌ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಡ್ರೋನ್‌ ಪ್ರತಾಪ್‌ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮನೆ ಬಳಿ ಪೊಲೀಸರು ತೆರಳಿದ್ದರು. ಆದರೆ, ಆತ ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ