ಆ್ಯಪ್ನಗರ

ಸಂತ್ರಸ್ತರಿಗೆ ಆರ್‌ಟಿಜಿಎಸ್‌ ಮೂಲಕ ಪರಿಹಾರ ವಿತರಣೆ: ಕಂದಾಯ ಸಚಿವ ಅಶೋಕ್‌

ಬರ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ. ಅವರಿಗೆ ಪರಿಹಾರ ವಿತರಿಸುವ ಕಾರ್ಯ ಆರಂಭವಾಗಿದೆ. ಆರ್‌ಟಿಜಿಎಸ್‌ ಮೂಲಕ ಖಾತೆಗಳಿಗೆ ಹಣ ಸಂದಾಯವಾಗುತ್ತಿದೆ.

Vijaya Karnataka Web 11 Oct 2019, 10:09 pm
ಬೆಂಗಳೂರು: ರಾಜ್ಯ ಎದುರಿಸಿರುವ ಅತಿವೃಷ್ಠಿ ಮತ್ತು ಭೀಕರ ಪ್ರವಾಹದಲ್ಲಿ ಸಂತ್ರಸ್ತರಿಗೆ ಆರ್‌ಟಿಜಿಎಸ್ ಮೂಲಕ ಪರಿಹಾರ ಹಣವನ್ನು ಸಂದಾಯ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್ .ಅಶೋಕ್ ಹೇಳಿದ್ದಾರೆ.
Vijaya Karnataka Web ಆರ್‌ ಅಶೋಕ್‌
ಆರ್‌ ಅಶೋಕ್‌


ವಿಧಾನ ಪರಿಷತ್ತಿನಲ್ಲಿ ಪಕೃತಿ ವಿಕೋಪ ಹಾಗೂ ಪರಿಹಾರ ಕುರಿತು ಮುಂದುವರೆದ ಚರ್ಚೆಯ ಹಂತದಲ್ಲಿ ಮಧ್ಯ ಪ್ರವೇಶಿಸಿ ಕಂದಾಯ ಸಚಿವರು ಮಾತನಾಡಿದರು.

10 ಸಾವಿರ, 25 ಸಾವಿರ ಮತ್ತು 1 ಲಕ್ಷ ರೂ. ಪರಿಹಾರ ಮೊತ್ತಗಳನ್ನು ಆಯಾ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಂದಾಯ ಮಾಡಲಾಗುತ್ತಿದೆ ಎಂದರು.

2 ಲಕ್ಷಕ್ಕೂ ಹೆಚ್ಚು ಜನರಿಗೆ ಆರ್ ಟಿಜಿಎಸ್ ಮೂಲಕ ಪರಿಹಾರ ಮೊತ್ತ ಸಂದಾಯವಾಗಿದೆ, ತೀವ್ರ ಪ್ರಮಾಣದಲ್ಲಿ ಹಾನಿಗೊಂಡಿರುವವರಿಗೆ ನಾಲ್ಕು ಲಕ್ಷ ರೂಪಾಯಿ ಮೊತ್ತವನ್ನು ಆರ್‌ಟಿಜಿಎಸ್ ಮೂಲಕವೇ ಸಂದಾಯ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ