ಆ್ಯಪ್ನಗರ

ಕಾಡ್ಗಿಚ್ಚು ವೇಳೆ ಪ್ರಾಣಿ,ಪಕ್ಷಿ ರಕ್ಷಣೆಗೆ ಅಧಿಕಾರಿಗಳೇ ಹೊಣೆಗಾರರು: ಹೈಕೋರ್ಟ್‌ ಆದೇಶ

ಕಾಡ್ಗಿಚ್ಚು ಸಂಭವಿಸಿದ ಸಮಯದಲ್ಲಾಗುವ ಅರಣ್ಯ, ಪ್ರಾಣಿ ಮತ್ತು ಪಕ್ಷಿ ಸಂಕುಲದ ರಕ್ಷ ಣೆಗೆ ಅರಣ್ಯ ಇಲಾಖೆ ಅಧಿಕಾರಿಗಳೇ ಸಂಪೂರ್ಣ ಜವಾಬ್ದಾರರು ಎಂದು ...

Vijaya Karnataka 1 Jun 2019, 5:00 am
ಬೆಂಗಳೂರು: ಕಾಡ್ಗಿಚ್ಚು ಸಂಭವಿಸಿದ ಸಮಯದಲ್ಲಾಗುವ ಅರಣ್ಯ, ಪ್ರಾಣಿ ಮತ್ತು ಪಕ್ಷಿ ಸಂಕುಲದ ರಕ್ಷ ಣೆಗೆ ಅರಣ್ಯ ಇಲಾಖೆ ಅಧಿಕಾರಿಗಳೇ ಸಂಪೂರ್ಣ ಜವಾಬ್ದಾರರು ಎಂದು ಹೈಕೋರ್ಟ್‌ ಆದೇಶಿಸಿದೆ.
Vijaya Karnataka Web fir


ಕೊಡಗು ಜಿಲ್ಲೆಯಲ್ಲಿ ಕಾಡ್ಗಿಚ್ಚಿನಿಂದ ನಾಶವಾಗುವ ಅರಣ್ಯ ಸಂಪತ್ತು ರಕ್ಷ ಣೆಗೆ ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಕೊಡಗು ಜಿಲ್ಲೆ ಕಾತಕೇರಿ ಗ್ರಾಮದ ಕೆ.ವಿ.ರವಿ ಚೆಂಗಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಲೇವಾರಿ ಮಾಡಿದೆ.

''ರಾಜ್ಯದ ಎಲ್ಲಾ ಅರಣ್ಯ ವಲಯಗಳಲ್ಲಿ ಕಾಡ್ಗಿಚ್ಚು ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ತಕ್ಷ ಣವೇ ಮುಂದಾಗಬೇಕು. ಇದಕ್ಕಾಗಿ ಎಲ್ಲ ಇಲಾಖೆಗಳ ಸಹಕಾರ ಪಡೆಯಬೇಕು. ಅವಘಡ ಸಂಭವಿಸಿದರೆ ಸ್ಥಳೀಯ ಅರಣ್ಯ ಅಧಿಕಾರಿಗಳನ್ನು ಹೊಣೆ ಮಾಡಬೇಕು,'' ಎಂದು ನ್ಯಾಯಪೀಠ ಆದೇಶಿಸಿದೆ.

''ಪರಿಸರ ಸಂರಕ್ಷ ಣೆಗೆ ಎಲ್ಲರೂ ಟೊಂಕಕಟ್ಟಿ ನಿಲ್ಲಬೇಕಾದ ಕಾಲ ಈಗ ಬಂದಿದೆ. ಮನುಷ್ಯ ತನ್ನ ಮಿತಿ ಮೀರಿರುವುದರಿಂದ ವನ್ಯಜೀವಿ ಮತ್ತು ಮಾನವ ಸಂಘರ್ಷ ಕಾಣಿಸಿಕೊಳ್ಳುತ್ತಿದೆ. ಇದು ಅಪಾಯಕಾರಿ ಮುನ್ಸೂಚನೆ ಆಗಿದೆ. ನಾವೀಗ ಎಚ್ಚೆತ್ತುಕೊಳ್ಳದೇ ಹೋದರೆ ಮುಂದೆ ಮಾನವನ ಅಸ್ತಿತ್ವವೇ ಇಲ್ಲದಂತಾಗುತ್ತದೆ,'' ಎಂದು ನ್ಯಾಯಪೀಠ ಎಚ್ಚರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ