ಆ್ಯಪ್ನಗರ

ರಾಮನಗರಕ್ಕೆ ಮಂಜೂರಾದ ಯೋಜನೆಗೆ ತಡೆ; ಸಿಎಂ v/s ಮಾಜಿ ಸಿಎಂ ತಿಕ್ಕಾಟ

ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿರುವ ಯೋಜನೆಗಳನ್ನು ಸಿಎಂ ಬಿಎಸ್‌ವೈ ಸರಕಾರ ತಡೆ ಹಿಡಿಯುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

Vijaya Karnataka Web 12 Dec 2019, 5:47 pm
ಬೆಂಗಳೂರು: ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿರುವ ಯೋಜನೆಗಳನ್ನು ಬಿಎಸ್‌ವೈ ಸರಕಾರ ತಡೆ ಹಿಡಿದಿದೆ ಎಂಬ ವಿಚಾರ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಿಎಂ ಬಿಎಸ್‌ ಯಡಿಯೂರಪ್ಪ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ.
Vijaya Karnataka Web former chief minister hd kumaraswamy allegation on chief minister bs yeddyurappa
ರಾಮನಗರಕ್ಕೆ ಮಂಜೂರಾದ ಯೋಜನೆಗೆ ತಡೆ; ಸಿಎಂ v/s ಮಾಜಿ ಸಿಎಂ ತಿಕ್ಕಾಟ


2018 ಎಚ್‌ಡಿಕೆ ಸರಕಾರದ ಅವಧಿಯಲ್ಲಿ ರಾಮನಗರ ಜಿಲ್ಲೆಗೆ ವಿವಿಧ ಅಭಿವೃದ್ದಿ ಯೋಜನೆಗಳನ್ನು ಮಂಜೂರು ಮಾಡಲಾಗಿತ್ತು. ಆದರೆ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರ ಜಿಲ್ಲೆ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ.


ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಬಿಎಸ್‌ ಯಡಿಯೂರಪ್ಪ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ ಎಚ್‌ಡಿ ಕುಮಾರಸ್ವಾಮಿ ಮಾಡಿದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ.

ಡಿಸಿಎಂ ಬೇಡ; ನಾನು ಸಿಎಂ ಹುದ್ದೆಯ ಆಕಾಂಕ್ಷಿ - ಉಮೇಶ್ ಕತ್ತಿ

ಈ ಕುರಿತಾಗಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಯೋಜನೆಗಳ ಮಂಜೂರು ಹಾಗೂ ಅನುದಾನ ವಿಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಎಂದು ತಾರತಮ್ಯ ಮಾಡಲಿಲ್ಲ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೆ ನೆರಲು ನೀಡಲಾಗಿದೆ. ನಮಗೆ ರಾಜ್ಯದ ಅಭಿವೃದ್ದಿಯಷ್ಟೇ ಮುಖ್ಯ ಎಂದಿದ್ದಾರೆ.

ಡಿಸಿಎಂ ಬೇಡ; ನಾನು ಸಿಎಂ ಹುದ್ದೆಯ ಆಕಾಂಕ್ಷಿ - ಉಮೇಶ್ ಕತ್ತಿ

ಸದ್ಯ ಈ ವಿಚಾರ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ