ಆ್ಯಪ್ನಗರ

ಪ್ರವಾಹ ಪೀಡಿತರಿಗೆ ಉಚಿತ ಶೈಕ್ಷಣಿಕ ದಾಖಲೆ

ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹದಿಂದಾಗಿ ಅಂಕಪಟ್ಟಿ ಮತ್ತು ಇತರೆ ಶೈಕ್ಷಣಿಕ ದಾಖಲೆ ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ ಹಾಗೂ ಶೈಕ್ಷಣಿಕ ದಾಖಲೆ ನೀಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿವೆ.

Vijaya Karnataka Web 20 Aug 2019, 5:00 am
ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧಾರ
Vijaya Karnataka Web educational record


ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹದಿಂದಾಗಿ ಅಂಕಪಟ್ಟಿ ಮತ್ತು ಇತರೆ ಶೈಕ್ಷಣಿಕ ದಾಖಲೆ ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ ಹಾಗೂ ಶೈಕ್ಷಣಿಕ ದಾಖಲೆ ನೀಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿವೆ.

ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶುಲ್ಕರಹಿತವಾಗಿ ದ್ವಿತೀಯ ಪಿಯುಸಿಯ 'ದ್ವಿ-ಪ್ರತಿ ಅಂಕಪಟ್ಟಿ'ಗಳು ಹಾಗೂ ಇತರೆ ಶೈಕ್ಷಣಿಕ ದಾಖಲೆ ನೀಡುವಂತೆ ಸೂಚಿಸಿದೆ. ಜತೆಗೆ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಗಳನ್ನು ಸಹ ತುರ್ತಾಗಿ ಒದಗಿಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕ್ರಮ ಕೈಗೊಂಡಿದೆ.

ದಾಖಲೆ ಪಡೆಯುವುದು ಹೇಗೆ?

ಪ್ರವಾಹಪೀಡಿತ 17 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ದ್ವಿತೀಯ ಪಿಯುಸಿ ದಾಖಲೆಗಳಿಗೆ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರ ಮೂಲಕ ಅರ್ಜಿ ಸಲ್ಲಿಸಿದರೆ, ಸಂಬಂಧಪಟ್ಟ ಕಾಲೇಜುಗಳಿಗೆ ಶೀಘ್ರ ದಾಖಲೆಗಳನ್ನು ಕಳುಹಿಸಿಕೊಡಲಾಗುತ್ತದೆ.

ಎಸ್ಸೆಸ್ಸೆಲ್ಸಿ ಅಂಕಪಟ್ಟಿ ಹಾಗೂ ಇತರೆ ಶೈಕ್ಷಣಿಕ ದಾಖಲೆಗಳಿಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಮೂಲಕ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಇತರೆ ವಿವರಗಳೊಂದಿಗೆ ಎಸ್ಸೆಸ್ಸೆಲ್ಸಿ ಬೋರ್ಡ್‌ಗೆ ಅರ್ಜಿ ಸಲ್ಲಿಸಿದರೆ, ತುರ್ತಾಗಿ ದಾಖಲೆ ಒದಗಿಸಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ತಿಳಿಸಿದ್ದಾರೆ.

ಪಿಯು ದಾಖಲಾತಿ ದಿನಾಂಕ ವಿಸ್ತರಣೆ:

2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಪ್ರಥಮ ಪಿಯುಸಿಗೆ ದಾಖಲಾಗುವ ದಿನಾಂಕವನ್ನು ಆಗಸ್ಟ್‌ 23ರ ವರೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಸ್ತರಿಸಿದೆ. ಪ್ರವಾಹಪೀಡಿತ 17 ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾಗದೇ ಇರುವ ವಿದ್ಯಾರ್ಥಿಗಳಿಗೆ ಇಲಾಖೆ ವಿಶೇಷ ಅವಕಾಶವನ್ನು ಕಲ್ಪಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ