ಆ್ಯಪ್ನಗರ

ಸದ್ದಿಲ್ಲದೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದ ಜಿ. ಪರಮೇಶ್ವರ್

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ರಾಜ್ಯ ರಾಜಕೀಯ ಬಗ್ಗೆ ವಿವರ ನೀಡಿದರು

Vijaya Karnataka 18 Sep 2019, 10:51 am
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಮಾಜಿ ಡಿಸಿಎಂ ಜಿ.ಪರಮೇಶ್ವರ್‌ ರಾಜ್ಯ ಕಾಂಗ್ರೆಸ್‌ ವಿದ್ಯಮಾನದ ಬಗ್ಗೆ ವಿವರ ಒಪ್ಪಿಸಿದ್ದಾರೆ.
Vijaya Karnataka Web g parameshwara


ಕಳೆದ ವಾರ ದಿಲ್ಲಿಗೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವಾಸ್ತವ್ಯ ಹೂಡಿದ್ದರೂ ಸೋನಿಯಾ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ, ಸೋನಿಯಾ ಅವರನ್ನು ಮಂಗಳವಾರ ಭೇಟಿಯಾಗಿದ್ದ ಪರಮೇಶ್ವರ್‌ ಸುಮಾರು 45 ನಿಮಿಷ ಸಮಾಲೋಚಿಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.

ದೋಸ್ತಿ ಸರಕಾರ ಪತನದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲೇ ಬಣ ರಾಜಕೀಯ ಚುರುಕಾಗಿದೆ. ಪ್ರತಿಪಕ್ಷದ ನಾಯಕನ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಮತ್ತೊಂದೆಡೆ ಪಕ್ಷದ ಸಂಘಟನೆಗೆ ಹಿನ್ನಡೆಯಾಗಿದ್ದು ಕಾರ್ಯಕರ್ತರ ಆತ್ಮಸ್ಥೈರ್ಯ ಕುಸಿದಿದೆ. ಈ ಎಲ್ಲವಿಚಾರವನ್ನು ಸೋನಿಯಾ ಗಾಂಧಿ ಗಮನಕ್ಕೆ ತಂದರು. ಪಕ್ಷಕ್ಕೆ ಪುನಶ್ಚೇತನವಾಗಬೇಕು. ಪಕ್ಷ ನಿಷ್ಟರಿಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು ಎನ್ನಲಾಗಿದೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಕ್ಷ ವಹಿಸಿದ್ದ ಎಲ್ಲಜವಾಬ್ದಾರಿಯನ್ನೂ ಅವರು ಸಮರ್ಥವಾಗಿ ನಿಭಾಯಿಸಿದ್ದರು. ಹಾಗಾಗಿ ಕಷ್ಟಕಾಲದಲ್ಲಿಅವರ ಬೆನ್ನಿಗೆ ಪಕ್ಷ ನಿಲ್ಲಬೇಕು ಎಂದು ಸೋನಿಯಾ ಬಳಿ ಪರಮೇಶ್ವರ್‌ ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ.

ಡಿಕೆಶಿ ಭೇಟಿ


ಈ ಮಧ್ಯೆ ದಿಲ್ಲಿಯ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದ ಡಿಕೆಶಿ ಅವರನ್ನೂ ಪರಮೇಶ್ವರ್‌ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ