ಆ್ಯಪ್ನಗರ

ಗಣೇಶ ಚತುರ್ಥಿ; ಕೆಎಸ್‌ಆರ್‌ಟಿಸಿಯಿಂದ 1800 ಹೆಚ್ಚುವರಿ ಬಸ್‌ ಸೇವೆ

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಆ...

Vijaya Karnataka 28 Aug 2019, 5:00 am
ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಆ. 30 ಮತ್ತು 31ರಂದು ಬೆಂಗಳೂರಿನಿಂದ ನಾನಾ ಪ್ರದೇಶಗಳಿಗೆ ಹೆಚ್ಚುವರಿಯಾಗಿ 1800 ಬಸ್‌ಗಳನ್ನು ವ್ಯವಸ್ಥೆಗೊಳಿಸಿದೆ.
Vijaya Karnataka Web 2412-2-2-50


ರಾಜ್ಯ ಮತ್ತು ಹೊರರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಸೆ. 2ರಂದು ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮಾರ್ಗದ ವಿಶೇಷ ಬಸ್‌ಗಳು ಸಂಚರಿಸಲಿವೆ. ಮೈಸೂರು ರಸ್ತೆಯ ಸ್ಯಾಟಲೈಟ್‌ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮಾರ್ಗದ ಬಸ್‌ಗಳು ತೆರಳಲಿವೆ.

ತಮಿಳುನಾಡು, ಆಂದ್ರಪ್ರದೇಶದ ಕಡೆ ಸೇರಿದಂತೆ ಇತರೆ ಪ್ರದೇಶಗಳಿಗೆ ಐಷಾರಾಮಿ ಬಸ್‌ಗಳು ಶಾಂತಿನಗರದಲ್ಲಿನ ಡಿಪೊ-4 ಮತ್ತು ಡಿಪೊ-2ರ ಮುಂಭಾಗದಿಂದ ಸಂಚರಿಸಲಿವೆ. ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್‌ಬಿಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ನಾಲ್ಕು ಅಥವಾ ಹೆಚ್ಚು ಮಂದಿ ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿಸಿದರೆ, ಬರುವ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ಸಿಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ