ಆ್ಯಪ್ನಗರ

ಭೂಸುಧಾರಣಾ ಕಾಯಿದೆ ವಿರುದ್ಧ ಹೋರಾಟಕ್ಕೆ ಸಿದ್ಧರಾಗಿ - ಶಾಸಕರಿಗೆ ಸಿದ್ದರಾಮಯ್ಯ ಸೂಚನೆ

ಹಣ ಇರುವವವರಿಗೆ ಕೃಷಿ ಜಮೀನು ಖರೀದಿಸಲು ಸರಕಾರ ಅವಕಾಶ ಮಾಡಿಕೊಡುತ್ತಿದೆ. ಇದರಿಂದ ಬಡ ರೈತ ಕುಟುಂಬಗಳು ನೆಲೆ ಕಳೆದುವಂತಾಗುತ್ತದೆ. ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿರುವ ಸರಕಾರದ ವಿರುದ್ಧ ಜನಾಂದೋಲನ ರೂಪಿಸಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Vijaya Karnataka 18 Jun 2020, 8:49 pm

ಬೆಂಗಳೂರು: ಉಳುವವನ ಭೂಮಿಯನ್ನು ಉಳ್ಳವರ ಹಿಡಿತಕ್ಕೆ ಒಪ್ಪಿಸಲು ಭೂಸುಧಾರಣಾ ಕಾಯಿದೆ ತಿದ್ದುಪಡಿ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಪಕ್ಷದ ಶಾಸಕರು ಸಿದ್ಧತೆ ಮಾಡಿಕೊಳ್ಳುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
Vijaya Karnataka Web Siddaramaiah in CLP meeting


ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘‘ಹಣ ಇರುವವವರಿಗೆ ಕೃಷಿ ಜಮೀನು ಖರೀದಿಸಲು ಸರಕಾರ ಅವಕಾಶ ಮಾಡಿಕೊಡುತ್ತಿದೆ. ಇದರಿಂದ ಬಡ ರೈತ ಕುಟುಂಬಗಳು ನೆಲೆ ಕಳೆದುವಂತಾಗುತ್ತದೆ. ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿರುವ ಸರಕಾರದ ವಿರುದ್ಧ ಜನಾಂದೋಲನ ರೂಪಿಸಬೇಕಿದೆ,’’ ಎಂದು ನಿರ್ದೇಶನ ನೀಡಿದರು.

ಭೂ ಸುಧಾರಣಾ ಕಾಯಿದೆಗೆ ಶೀಘ್ರ ಸುಗ್ರೀವಾಜ್ಞೆ- ಯಡಿಯೂರಪ್ಪ ಅಚ್ಚರಿಯ ಹೇಳಿಕೆ

ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರ ಗೌರವಾರ್ಥ ಮೌನಾಚರಣೆ ಮಾಡಿ ಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು.

ಪ್ರಧಾನಿಗೆ ಪತ್ರಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಗುರುವಾರ ಪತ್ರ ಬರೆದಿದ್ದಾರೆ. ಕಚ್ಚಾ ತೈಲದ ಬೆಲೆ ಕುಸಿದಿದ್ದರೂ ದರ ಕಡಿಮೆ ಮಾಡಿಲ್ಲ. ಬದಲು, ಬೆಲೆ ಏರಿಸಿ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ದೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ