ಆ್ಯಪ್ನಗರ

ಶುಕ್ರವಾರದ ಪ್ರಾರ್ಥನೆ ಮಸೀದಿಯಲ್ಲಿ ಬೇಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮನವಿ

ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಶುಕ್ರವಾರದ ಜುಮ್ಮಾ ನಮಾಜ್‌ನ್ನು ಮಸೀದಿಯಲ್ಲಿ ನಿರ್ವಹಿಸದಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಲಾಖೆ ಮುಸ್ಲಿಮರಲ್ಲಿ ಮನವಿ ಮಾಡಿಕೊಂಡಿದೆ. ಇತರ ನಮಾಜ್‌ಗಳನ್ನು ಮನೆಯಲ್ಲೇ ನಿರ್ವಹಿಸುವಂತೆ ಸೂಚಿಸಿದೆ.

Vijaya Karnataka Web 23 Mar 2020, 4:35 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿರುವುದರಿಂದ ಶುಕ್ರವಾರದ ಜುಮ್ಮಾ ಪ್ರಾರ್ಥನೆ ಸೇರಿದಂತೆ ಇತರ ನಮಾಝ್‌ಗಳನ್ನು ಮನೆಯಲ್ಲಿ ನಿರ್ವಹಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಲಾಖೆಮನವಿ ಮಾಡಿಕೊಂಡಿದೆ.
Vijaya Karnataka Web corona


ಈ ಕುರಿತಾಗಿ ಮುಸ್ಲಿಮರಲ್ಲಿ ಮನವಿ ಮಾಡಿಕೊಂಡಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎ.ಬಿ ಇಬ್ರಾಹೀಂ, ಮಸೀದಿಯಲ್ಲಿ ಭುಜಕ್ಕೆ ಭುಜಕೊಟ್ಟು ನಮಾಜ್ ನಿರ್ವಹಿಸಲಾಗುತ್ತದೆ. ಈ ಸಂದರ್ಭದಲ್ಲಿ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗಿದೆ.


ಕೊರೊನಾಗೆ ತಡೆ: ಹ್ಯಾಂಡ್‌ ಸ್ಯಾನಿಟೈಸರ್‌ ಹುಡುಕಿದ್ದು ಯಾರು?, ನೆಟ್ ನಲ್ಲಿ ಹುಡುಕಾಟ

ಜುಮ್ಮಾ ನಮಾಝ್‌ಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ ಮಾರ್ಚ್‌ 31 ರತನಕ ಶುಕ್ರವಾರದ ಜುಮ್ಮಾ ನಮಾಜ್ ಒಳಗೊಂಡು ಇತರ ನಮಾಜ್‌ಗಳನ್ನು ಮನೆಯಲ್ಲಿಯೇ ನಿರ್ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಮುಸ್ಲಿಮರ ಪವಿತ್ರ ಧಾರ್ಮಿಕ ಸ್ಥಳವಾದ ಮೆಕ್ಕಾದಲ್ಲೂ ಹಜ್ ಯಾತ್ರೆಗೆ ಅನುಮತಿ ನೀಡಲಾಗುತ್ತಿಲ್ಲ. ಮುಸ್ಲಿಮರೇ ಹೆಚ್ಚಾಗಿರುವ ಅರಬ್ ದೇಶಗಳಲ್ಲಿ ಜುಮ್ಮಾ ನಮಾಜ್ ಸೇರಿದಂತೆ ಯಾವುದೇ ನಮಾಜ್‌ಗಳನ್ನು ಮಸೀದಿಗಳಲ್ಲಿ ನಿರ್ವಹಿಸುತ್ತಿಲ್ಲ.


ಈ ನಿಟ್ಟಿನಲ್ಲಿ ಮುಂಜಾಗರೂಕತಾ ಕ್ರಮವಾಗಿ ರಾಜ್ಯದಲ್ಲೂ ಮಾರ್ಚ್‌ 31 ರ ವರೆಗೆ ಶುಕ್ರವಾರದ ನಮಾಜ್ ಸೇರಿದಂತೆ ಎಲ್ಲಾ ನಮಾಜ್‌ಗಳನ್ನು ಮನೆಗಳಲ್ಲೇ ನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಕುರಿತಾಗಿ ಮಸೀದಿಗಳಲ್ಲಿ ಹಾಗೂ ಸ್ಥಳೀಯವಾಗಿ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ