ಆ್ಯಪ್ನಗರ

ಬಹುಮತ ಸಾಬೀತಿಗೆ ಸೂಚಿಸಿದ ರಾಜ್ಯಪಾಲರ ವಿಶೇಷ ಅಧಿಕಾರಿಗಳು

ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲರ ವಿಶೇಷ ಅಧಿಕಾರಿಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ.

Vijaya Karnataka Web 19 Jul 2019, 11:53 am
ಬೆಂಗಳೂರು: ವಿಧಾನಸೌಧಕ್ಕೆ ಆಗಮಿಸಿರುವ ರಾಜ್ಯಪಾಲರ ವಿಶೇಷ ಅಧಿಕಾರಿಗಳು, ಬಹುಮತ ಸಾಬೀತು ಪಡಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ.
Vijaya Karnataka Web g


ನಿನ್ನೆ (ಗುರುವಾರ) ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುವ ಮೂಲಕ ಸದನದ ಮಾಹಿತಿ ಪಡೆದುಕೊಂಡಿದ್ದ ರಾಜ್ಯಪಾಲರ ವಿಷೇಶ ಅಧಿಕಾರಿಗಳು, ಇಂದು (ಶುಕ್ರವಾರ) ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿ ಕಲಾಪ ವೀಕ್ಷಿಸುತ್ತಿದ್ದಾರೆ.

ರಾಜ್ಯಪಾಲರ ಸೂಚನೆ ಮೇರಿಗೆ ಕಲಾಪದಲ್ಲಿ ಭಾಗವಹಿಸಿರುವ ವಿಶೇಷಾಧಿಕಾರಿಗಳು, ಕಲಾಪದ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರಿಗೆ ರವಾನಿಸಲಿದ್ದಾರೆ.

1.30ಕ್ಕೆ ವಿಶ್ವಾಸಮತ ಯಾಚನೆ


ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಇಂದೂ ಮುಂದುವರಿಯಲಿದ್ದು, ಮಧ್ಯಾಹ್ನ 1:30ರೊಳಗೆ ವಿಶ್ವಾಸ ಮತ ಸಾಬೀತುಪಡಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಸರಕಾರಕ್ಕೆ ಆದೇಶಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ