ಆ್ಯಪ್ನಗರ

ಭೂಗತ ಪಾತಕಿ ರವಿ ಪೂಜಾರಿಯನ್ನು ಕಸ್ಟಡಿಗೆ ಪಡೆಯಲು ಮುಂದಾದ ಗುಜರಾತ್ ಪೊಲೀಸರು

2017ರ ಜನವರಿಯಲ್ಲಿ ಗುಜರಾತ್‌ನ ಬೊರ್ಸಾದ್‌ ಕೌನ್ಸಿಲರ್‌ ಆಗಿದ್ದ ಪ್ರಗ್ನೇಶ್‌ ಪಟೇಲ್‌ ಎಂಬುವರ ಮೇಲೆ ಬೈಕ್‌​ನಲ್ಲಿ ಬಂದ ಮೂವರು ಆಗಂತುಕರು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದರು. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮೂವರು ಸುಪಾರಿ ಹಂತಕರನ್ನು ಗುಜರಾತ್‌ ಎಟಿಎಸ್‌ ಅಧಿಕಾರಿಗಳು ಬಂಧಿಸಿದ್ದರು.

Vijaya Karnataka 22 Jun 2021, 7:29 am

ಹೈಲೈಟ್ಸ್‌:

  • ಕೇರಳ ಪೊಲೀಸರ ನಂತರ ರವಿಪೂಜಾರಿಯನ್ನು ಕಸ್ಟಡಿಗೆ ಪಡೆಯಲು ಮುಂದಾದ ಗುಜರಾತ್‌ ಪೊಲೀಸರು
  • ಭೂಗತ ಪಾತಕಿ ರವಿಪೂಜಾರಿಯನ್ನು ಬಾಡಿ ವಾರೆಂಟ್‌ ಮೇಲೆ ಕಸ್ಟಡಿಗೆ ಪಡೆಯಲು ಮುಂದು
  • ಬೆಂಗಳೂರಿನ 62ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಗುಜರಾತ್‌ ಭಯೋತ್ಪಾದಕ ನಿಗ್ರಹ ದಳ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ravi_Pujari
ಬೆಂಗಳೂರು: ಕೇರಳ ಪೊಲೀಸರ ನಂತರ ಇದೀಗ ಗುಜರಾತ್‌ ಪೊಲೀಸರು ಭೂಗತ ಪಾತಕಿ ರವಿಪೂಜಾರಿಯನ್ನು ಬಾಡಿ ವಾರೆಂಟ್‌ ಮೇಲೆ ಕಸ್ಟಡಿಗೆ ಪಡೆಯಲು ಮುಂದಾಗಿದ್ದಾರೆ.
ಮಹಾರಾಷ್ಟ್ರ, ಕೇರಳ ಬಳಿಕ ಗುಜರಾತ್‌ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್‌) ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 62ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. 2017ರ ಜನವರಿಯಲ್ಲಿ ಗುಜರಾತ್‌ನ ಬೊರ್ಸಾದ್‌ ಕೌನ್ಸಿಲರ್‌ ಆಗಿದ್ದ ಪ್ರಗ್ನೇಶ್‌ ಪಟೇಲ್‌ ಎಂಬುವರ ಮೇಲೆ ಬೈಕ್‌ನಲ್ಲಿ ಬಂದ ಮೂವರು ಆಗಂತುಕರು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದರು. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮೂವರು ಸುಪಾರಿ ಹಂತಕರನ್ನು ಗುಜರಾತ್‌ ಎಟಿಎಸ್‌ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ವೇಳೆ ಪಾತಕಿಯಾಗಿದ್ದ ರವಿಪೂಜಾರಿ ಪಾತ್ರ ಬೆಳಕಿಗೆ ಬಂದಿತ್ತು.
ನೈಸ್‌ ಕಂಪನಿಗೆ ₹2 ಕೋಟಿ ಪರಿಹಾರ ನೀಡುವಂತೆ ಎಚ್‌ಡಿ ದೇವೇಗೌಡರಿಗೆ ಆದೇಶಿಸಿದ ನ್ಯಾಯಾಲಯ
ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ನೀಡುವಂತೆ ಎಟಿಎಸ್‌ ಅಧಿಕಾರಿಗಳು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಿದ್ದ ಕೊಚ್ಚಿ ಬ್ಯೂಟಿ ಪಾರ್ಲರ್‌ ಮೇಲಿನ ಗುಂಡಿನ ದಾಳಿ ಪ್ರಕರಣದ ಸಂಬಂಧ ರವಿ ಪೂಜಾರಿಯನ್ನ ಕೇರಳ ಪೊಲೀಸರು ಎಂಟು ದಿನಗಳ ಕಾಲ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ 2019ರ ಜ.19ರಂದು ಸೆನೆಗಲ್‌ ಪೊಲೀಸರು ಬಂಧಿಸಿ, ದೇಶಕ್ಕೆ ಕರೆತರುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ