ಆ್ಯಪ್ನಗರ

ಹಾಲಪ್ಪ ಜತೆ ಯಡಿಯೂರಪ್ಪ ಸಂಧಾನ ಯಶಸ್ವಿ-ಸಾಗರದಿಂದ ಟಿಕೆಟ್‌ ಸಾಧ್ಯತೆ

ಸಾಗರದ ಟಿಕೆಟ್‌ ವಿಚಾರದಲ್ಲಿ ಕೆಲವು ದಿನಗಳಿಂದ ಮುನಿಸಿಕೊಂಡಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌...

Vijaya Karnataka 3 Apr 2018, 5:00 am
ಬೆಂಗಳೂರು : ಸಾಗರದ ಟಿಕೆಟ್‌ ವಿಚಾರದಲ್ಲಿ ಕೆಲವು ದಿನಗಳಿಂದ ಮುನಿಸಿಕೊಂಡಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ಬಹುತೇಕ ಅವರು ಬಿಜೆಪಿಯಲ್ಲಿಯೇ ಮುಂದುವರಿಯಲಿದ್ದಾರೆ.
Vijaya Karnataka Web halappa


ಬೆಂಗಳೂರಿನ ಯಡಿಯೂರಪ್ಪ ನಿವಾಸದಲ್ಲಿ ಸೋಮವಾರ ರಾತ್ರಿ ನಡೆದ ಮಾತುಕತೆಯಂತೆ ಸಾಗರ ಕ್ಷೇತ್ರದಿಂದ ಹಾಲಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಈ ಬೆಳವಣಿಗೆಯೊಂದಿಗೆ ಸಾಗರ ಟಿಕೆಟ್‌ ತಮಗೆ ಖಚಿತವೆಂದು ಭಾವಿಸಿದ್ದ ಬೇಳೂರು ಗೋಪಾಲಕೃಷ್ಣ ಅವರ ನಡೆ ಸಾಕಷ್ಟು ಕುತೂಹಲ ಕೆರಳಿಸಿದೆ. ಇತ್ತೀಚೆಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಸೊರಬಕ್ಕೆ ಕುಮಾರ ಬಂಗಾರಪ್ಪ, ಸಾಗರಕ್ಕೆ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆಗಳಿವೆ ಎಂಬ ಮಾಹಿತಿಗಳ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಅವರು ತಮ್ಮ ಅಸಮಾಧಾನ ಹೊರಹಾಕಿ ಪಕ್ಷ ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು.

ಯಡಿಯೂರಪ್ಪ, ಹಾಲಪ್ಪ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ನಡೆಸಿದ ಮಾತುಕತೆಯಂತೆ ಹಾಲಪ್ಪ ಅವರ ಮಂಗಳವಾರದಿಂದಲೇ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಆದರೆ ಮಾತುಕತೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೆ ಹಾಲಪ್ಪ ತೆರಳಿರುವುದು ಇನ್ನೂ ಗೊಂದಲ ಬಗೆಹರಿದಂತೆ ಕಾಣುತ್ತಿಲ್ಲ.

ಈ ಮಧ್ಯೆ ಸುದ್ದಿಗಾರರ ಜತೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ''ಟಿಕೆಟ್‌ ವಿಚಾರದಲ್ಲಿ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ, ಆ ತೀರ್ಮಾನಕ್ಕೆ ಬದ್ಧವಿರುವುದಾಗಿ ಹೇಳಿದ್ದು ಅವರು ಬಿಜೆಪಿಯಲ್ಲಿಯೇ ಇರುತ್ತಾರೆಂಬ ವಿಶ್ವಾಸವಿದೆ. ಹಾಲಪ್ಪ ಅವರಿಗೆ ಬೇಸರವಾಗಿದ್ದದು ನಿಜ. ಆದರೆ ಈಗ ಖುಷಿಯಾಗಿದ್ದಾರೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ