ಆ್ಯಪ್ನಗರ

ಕಾಲಾ ಚಿತ್ರ ಬಿಡುಗಡೆ; ಕೋರ್ಟ್‌ ಹಸ್ತಕ್ಷೇಪ ಇಲ್ಲ; ಭದ್ರತೆಗಾಗಿ ಮನವಿ ಸಲ್ಲಿಸಲು ಸೂಚನೆ

ಕಾಲಾ ಚಿತ್ರ ಬಿಡುಗಡೆಗೆ ಹಾದಿ ಸುಗಮ

Vijaya Karnataka Web 5 Jun 2018, 2:18 pm
ಬೆಂಗಳೂರು: ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 'ಕಾಲಾ' ಚಿತ್ರ ಕರ್ನಾಟಕದಲ್ಲಿ ಬಿಡುಗಡೆಗೆ ಹಾದಿ ಸುಗಮವಾಗಿದೆ.
Vijaya Karnataka Web ಕಾಲಾ ಚಿತ್ರ
ಕಾಲಾ ಚಿತ್ರ


ಕಾಲಾ ಚಿತ್ರ ಬಿಡುಗಡೆಗೆ ಭದ್ರತೆ ಕೋರಿ ಚಿತ್ರತಂಡದವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಬಿಡುಗಡೆ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಲ್ಲದೇ ಚಿತ್ರ ಬಿಡುಗಡೆಯಾಗುವ ಚಿತ್ರಮಂದಿರಗಳಿಗೆ ಭದ್ರತೆ ನೀಡುವ ಜವಾಬ್ದಾರಿ ಸರಕಾರದ ಮೇಲಿದೆ ಎಂದೂ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಚಿತ್ರ ನಿಷೇಧದ ಬಗ್ಗೆ ಸರಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲವಾದ್ದರದ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ. ಎಲ್ಲೆಲ್ಲಿ ಚಿತ್ರ ಬಿಡುಗಡೆ ಮಾಡಲಾಗುತ್ತಿದೆಯೋ ಆ ಚಿತ್ರಮಂದಿರಗಳ ವಿವರ ನೀಡಿದರೆ ಅವುಗಳಿಗೆ ಸೂಕ್ತ ಭದ್ರತೆ ಒದಗಿಸುವುದು ಸರಕಾರದ ಕರ್ತವ್ಯ ಎಂದು ನ್ಯಾಯಪೀಠ ತಿಳಿಸಿದೆ.

ಚಿತ್ರ ವೀಕ್ಷಕರಿಗೆ ವಿತರಕರಿಗೆ ತೊಂದರೆ ಆಗದಂತೆ , ಶಾಂತಿಯುತ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಸರಕಾರಕ್ಕೆ ನ್ಯಾಯಪೀಠ ಸೂಚಿಸಿದೆ.

ಅಲ್ಲದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಹೈಕೋರ್ಟ್‌ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ