ಆ್ಯಪ್ನಗರ

‘ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’; ಸಚಿವ ಸುಧಾಕರ್‌ ಮನವಿ

ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಪೋಷಕರಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಮನವಿ ಮಾಡಿದ್ದಾರೆ.

Vijaya Karnataka Web 1 Jan 2021, 9:40 am
ಬೆಂಗಳೂರು: ಇಂದಿನಿಂದ ಕರ್ನಾಟಕ ರಾಜ್ಯದ ಮಕ್ಕಳು ಮತ್ತೆ ಶಾಲೆ ಕಡೆ ಮುಖ ಮಾಡ್ತಿದ್ದಾರೆ. ಹೊಸ ವರ್ಷಕ್ಕೆ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಂಡಿವೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಕಿವಿ ಮಾತು ಹೇಳಿದ್ದಾರೆ.
Vijaya Karnataka Web dr. k. sudhakar


ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಸುಧಾಕರ್, ‘ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ನನ್ನ ಕಿವಿಮಾತು ಎಂದು ಹೇಳಿದ್ದಾರೆ.

ಹೆಚ್ಚಿನ ಮೆಡಿಕಲ್ ಕಾಲೇಜುಗಳ ಸ್ಥಾಪನೆಗೆ ಕರ್ನಾಟಕ ಸರ್ಕಾರ ಚಿಂತನೆ: ಡಾ. ಕೆ ಸುಧಾಕರ್

ಸರಣಿ ಟ್ವೀಟ್‌ ಮಾಡಿರುವ ಅವರು, ‘SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 'ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ' ಎಂಬುದೇ ಸರ್ಕಾರದ ಧ್ಯೇಯ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ವರ್ಷಕ್ಕೆ ಗುಡ್‌ನ್ಯೂಸ್‌ ನೀಡಿದ ಬಿಎಂಟಿಸಿ; ವೋಲ್ವೋ ಬಸ್‌ಗಳ ಟಿಕೆಟ್‌, ಪಾಸ್‌ ದರ ಇಂದಿನಿಂದ ಕಡಿತ..!

ಇನ್ನು ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ