ಆ್ಯಪ್ನಗರ

ನಾನಾ ಕಡೆ ಮಳೆ: ಅಪಾಯದ ಮಟ್ಟ ಮೀರಿದ ನದಿಗಳು, ಶಾಲೆಗೆ ರಜೆ

ಚಿಕ್ಕಮಗಳೂರು ಮತ್ತು ಮಡಿಕೇರಿಗಳಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಡಿಕೇರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Vijaya Karnataka Web 28 Jun 2018, 10:42 am
ಬೆಂಗಳೂರು : ಚಿಕ್ಕಮಗಳೂರು ಮತ್ತು ಮಡಿಕೇರಿಗಳಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಡಿಕೇರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜನಜೀವನ,ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
Vijaya Karnataka Web rain1.


ಶೃಂಗೇರಿ, ಕೊಪ್ಪ, ಮೂಡಿಗೆರೆ, ಎನ್.ಆರ್. ಪುರ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ತುಂಗ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ಪಾತ್ರಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳ ಒಳಹರಿವು ಹೆಚ್ಚಳಗೊಂಡಿದೆ.

ಶೃಂಗೇರಿಯ ಶಾರಾದಾಂಬೆಯ ದೇವಾಲಯದ ಬಳಿ ಇರುವ ಕಪ್ಪೆ ಶಂಕರನಾರಾಯಣ ದೇವಾಲಯ ಮುಳುಗಡೆಯಾಗಿದೆ. ಗುರುಗಳ ಸಂಧ್ಯಾವಂದನೆ ಮಂಟಪ ಕೂಡಾ ಮುಳುಗಿದೆ. ಶೃಂಗೇರಿ ದೇವಾಲಯಕ್ಕೆ ಹೋಗುವುದಕ್ಕೆ ಇದ್ದ ಮತ್ತೊಂದು ರಸ್ತೆ ಮುಳುಗಡೆಯಾಗಿ ಗಾಂಧಿ ಮೈದಾನದಲ್ಲೂ ನೀರು ತುಂಬಿಕೊಂಡಿದೆ.

ಹೊರನಾಡು ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ಸೇತುವೆ ಮೇಲೆ ಭದ್ರಾ ನದಿ ಹರಿಯುತ್ತಿದೆ. ಕಳಸ - ಹೊರನಾಡು ರಸ್ತೆ ಸಂಪರ್ಕ ಬಂದ್ ಆಗಿದೆ. ಕಳೆದ ರಾತ್ರಿಯಿಂದ ಕುದುರೆಮುಖ, ಕಳಸ, ಹೊರನಾಡು ಸುತ್ತಮುತ್ತ ಮಳೆಯಾಗುತ್ತಿದೆ.

ಮಡಿಕೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಡಿಪಿಐ ಮಂಜುಳಾ ಅವರು ರಜೆ ಪ್ರಕಟಿಸಿದ್ದಾರೆ. ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ