ಆ್ಯಪ್ನಗರ

ದಕ್ಷಿಣ ಕನ್ನಡ ಮಳೆಗೆ 2 ಬಲಿ; 20 ಕೋಟಿ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದು, ಆಸ್ತಿ ಪಾಸ್ತಿಗಳಿಗೆ ಒಟ್ಟು 20 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಬುಧವಾರ ಹೇಳಿದ್ದಾರೆ.

Vijaya Karnataka Web 31 May 2018, 9:12 am
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದು, ಆಸ್ತಿ ಪಾಸ್ತಿಗಳಿಗೆ ಒಟ್ಟು 20 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಬುಧವಾರ ಹೇಳಿದ್ದಾರೆ.
Vijaya Karnataka Web mng rain


ಮೃತ ಇಬ್ಬರು ಮಹಿಳೆಯರ ಕುಟುಂಬಕ್ಕೂ ಬುಧವಾರ ಬೆಳಗ್ಗೆಯೇ ತಲಾ ಐದು ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಒಟ್ಟು 560 ಮನೆಗಳಿಗೆ ಹಾನಿಯಾಗಿದೆ. ಸಂಪೂರ್ಣ ಹಾನಿಯಾದ ಮನೆಗಳಿಗೆ ಎರಡು ದಿನದಲ್ಲಿ, ಭಾಗಶಃ ಹಾಗೂ ಅಲ್ಪ ಹಾನಿಯಾದ ಮನೆಗಳಿಗೆ ಪರಿಶೀಲನೆ ಬಳಿಕ ಪರಿಹಾರ ವಿತರಿಸಲಾಗುವುದು ಎಂದರು.

ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಗೆ ನಗರದೆಲ್ಲೆಡೆ ಕೃತಕ ನೆರೆ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸಂಜೆವರೆಗೂ ಮಳೆ ಸುರಿದ ಪರಿಣಾಮ ಬಹುತೇಕ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿತ್ತು. ಬುಧವಾರ ಮಳೆ ನೀರಿನ ಪ್ರಮಾಣ ತಗ್ಗಿದ್ದು, ಪರಿಸ್ಥಿತಿ ಸುಧಾರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ