ಆ್ಯಪ್ನಗರ

ರಾಜ್ಯದಲ್ಲಿ ಭಾರೀ ಮಳೆ ಸಂಭವ : ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಗುರುವಾರದಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜೂ.16 ರಿಂದ ಜೂ.20ರವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijaya Karnataka Web 16 Jun 2022, 9:57 am
ಬೆಂಗಳೂರು : ರಾಜ್ಯದಲ್ಲಿ ಗುರುವಾರದಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜೂ.16 ರಿಂದ ಜೂ.20ರವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Vijaya Karnataka Web rain


ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಜೂ.16 ರಿಂದ 19ರವರೆಗೆ ಯಲ್ಲೋ ಅಲರ್ಟ್‌ ನೀಡಿದರೆ, ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜೂ.17 ರಿಂದ ಜೂ.20ರವರೆಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ.

ಜೂ.15ರ ಬುಧವಾರ ಮೈಸೂರಿನಲ್ಲಿ 8 ಸೆಂ.ಮೀ, ತುಮಕೂರು ಜಿಲ್ಲೆಯ ಸಿರಾದಲ್ಲಿ6 ಸೆಂ.ಮೀ., ಕೊಪ್ಪಳ ಜಿಲ್ಲೆಯ ಬೇವೂರು ಹಾಗೂ ತುಮಕೂರು ಜಿಲ್ಲೆಯ ಪಾವಗಡದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.

ಆರಂಭದಲ್ಲಿ ಮುಂಗಾರು ಚುರುಕು, ಬಳಿಕ ದುರ್ಬಲ ಸಾಧ್ಯತೆ! ಕರ್ನಾಟಕದ ರೈತರಲ್ಲಿ ಮನೆ ಮಾಡಿದ ಆತಂಕ

ರಾಜ್ಯಕ್ಕೆ ಮುಂಗಾರು ಮಾರುತಗಳು ಪ್ರವೇಶಿಸಿ ವಾರಗಳೇ ಉರುಳಿದರೂ, ಇನ್ನೂ ಮಳೆ ಬಿರುಸು ಪಡೆಯದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಮೇ ತಿಂಗಳಿನಲ್ಲಿ ಬಿದ್ದ ಮಳೆಯಿಂದ ಸಂತೋಷಗೊಂಡು ಭೂಮಿ ಹಸನುಗೊಳಿಸಿಕೊಂಡಿದ್ದ ರೈತರು, ಈಗ ಬಿತ್ತನೆ ಮಾಡಲು ಮಳೆಗಾಗಿ ಕಾದಿದ್ದರು. ಇದೀಗ ಉತ್ತಮ ಮಳೆ ಬೀಳುತ್ತಿರುವುದು ರೈತರಲ್ಲಿ ಸಂತಸ ತಂದಿದೆ.

ದಿಲ್ಲಿಯಲ್ಲಿ ತಗ್ಗಿದ ತಾಪಮಾನ :ಮಂಗಳವಾರ ದೆಹಲಿಯಲ್ಲಿ ಮೋಡ ಕವಿದಿದ್ದು, ಈ ತಿಂಗಳ ಮೊದಲ ಬಾರಿಗೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಫ್ದರ್‌ಜಂಗ್ ವೀಕ್ಷಣಾಲಯ ಗರಿಷ್ಠ 39.6 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ. ಕನಿಷ್ಠ ತಾಪಮಾನವು 31.2 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಸಿದೆ. ಸೋಮವಾರ ಗರಿಷ್ಠ ತಾಪಮಾನ 43.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಷ್ಟ್ರ ರಾಜಧಾನಿಯಾದ್ಯಂತ ಹವಾಮಾನ ಕೇಂದ್ರಗಳು 38 ಡಿಗ್ರಿ ಸೆಲ್ಸಿಯಸ್ ಮತ್ತು 42 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನವನ್ನು ದಾಖಲಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ