ಆ್ಯಪ್ನಗರ

ರಾಜ್ಯಾದ್ಯಂತ ಭಾರಿ ಮಳೆ: ಮೈಸೂರಿನಲ್ಲಿ ವ್ಯಕ್ತಿ ಸಾವು

ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನ ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ತಡರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ರಾಜಧಾನಿ ಬೆಂಗಳೂರಿನ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.

ವಿಕ ಸುದ್ದಿಲೋಕ 15 Aug 2017, 12:13 pm
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನ ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ತಡರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ರಾಜಧಾನಿ ಬೆಂಗಳೂರಿನ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.
Vijaya Karnataka Web heavy rainfall man died in mysore
ರಾಜ್ಯಾದ್ಯಂತ ಭಾರಿ ಮಳೆ: ಮೈಸೂರಿನಲ್ಲಿ ವ್ಯಕ್ತಿ ಸಾವು


ಸಿಲ್ಕ್ ಬೋರ್ಡ್, ಎಲೆಕ್ಟ್ರಾನಿಕ್ ಸಿಟಿ, ಶಾಂತಿನಗರ ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಮಂಡ್ಯದಲ್ಲಿ ಪಥ ಸಂಚಲನ ರದ್ದು...

ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಪಥ ಸಂಚಲನ ರದ್ದುಗೊಳಿಸಲಾಗಿದೆ. ಪಥ ಸಂಚಲನಕ್ಕೆ ಅಭ್ಯಾಸ ಮಾಡಿ ತಯಾರಾಗಿದ್ದ ವಿದ್ಯಾರ್ಥಿಗಳಲ್ಲಿ ನಿರಾಸೆ ಮೂಡಿಸಿದೆ.

ಗೋಡಿ ಕುಸಿದು ವ್ಯಕ್ತಿ ಸಾವು...

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಗೋಡೆ ಕುಸಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಮೈಸೂರ ಜಿಲ್ಲೆಯ ಗಾಂಧಿನಗರದ ಲಿಡ್ಕರ್ ಕಾಲೋನಿಯಲ್ಲಿ ವರದಿಯಾಗಿದೆ. ಮಗ್ಗಿ (40) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಎನ್.ಆರ್.ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ