ಆ್ಯಪ್ನಗರ

ಪೌರಾಡಳಿತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ರಾಜ್ಯ ಸರ್ಕಾರ ನಿಗದಿಪಡಿಸಿದ ಮೀಸಲಿಗೆ ಹೈಕೋರ್ಟ್‌ ತಡೆ..!

ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸರಕಾರ ಅ.8ರಂದು ಹೊರಡಿಸಿರುವ ಅಧಿಸೂಚನೆಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗುವುದು ಎಂದು ನ್ಯಾಯಾಲಯ ಆದೇಶಿಸಿದೆ.

Vijaya Karnataka Web 20 Oct 2020, 6:19 am
ಬೆಂಗಳೂರು: ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲು ನಿಗದಿಪಡಿಸಿ ರಾಜ್ಯ ಸರಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆ ನೀಡಿದೆ.
Vijaya Karnataka Web high court of karnataka


ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪುರಸಭೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಹೈಕೋರ್ಟ್‌ ಈಗಾಗಲೇ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ಅಧಿಸೂಚನೆಗೆ ಮಧ್ಯಂತರ ತಡೆ ನೀಡಿ, ಆ ಕುರಿತು ಪರಿಶೀಲನೆಗೆ ಸಮಿತಿ ರಚಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಗುರು ರಾಘವೇಂದ್ರ ಬ್ಯಾಂಕ್‌ ಹಗರಣ ಕೇಸ್; ಆಡಳಿತಾಧಿಕಾರಿ ನೇಮಿಸುವಂತೆ ಹೈಕೋರ್ಟ್‌ ಸೂಚನೆ

ಆ ಅರ್ಜಿಗಳಲ್ಲಿ ಪ್ರಸ್ತಾಪಿಸಿರುವ ಆಕ್ಷೇಪಗಳನ್ನು ಈ ಅರ್ಜಿಗಳಲ್ಲಿ ಎತ್ತಲಾಗಿದೆ. ಹಾಗಾಗಿ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸರಕಾರ ಅ.8ರಂದು ಹೊರಡಿಸಿರುವ ಅಧಿಸೂಚನೆಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗುವುದು ಎಂದು ನ್ಯಾಯಾಲಯ ಆದೇಶಿಸಿದೆ.

ನಿಮ್ಮಲ್ಲಿ ಬಂಡೆಯಿರಬಹುದು, ಆದರೆ ನಮ್ಮಲ್ಲಿ ಬಂಡೆ ಒಡೆಯುವ ಡೈನಮೈಟ್‌ಗಳಿವೆ: ನಳಿನ್‌ ಕುಮಾರ್

ಅಡ್ವೊಕೇಟ್‌ ಜನರಲ್‌ ಅರ್ಜಿಗಳ ವಿಚಾರಣಾ ಸಿಂಧುತ್ವ ಪ್ರಶ್ನೆ ಎತ್ತಿರುವುದರಿಂದ ತ್ವರಿತ ಇತ್ಯರ್ಥಕ್ಕೆ ಪರಿಗಣಿಸಬೇಕಾಗಿದೆ. ಆದ್ದರಿಂದ ಅ.8ರ ಅಧಿಸೂಚನೆಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗುವುದು. ಒಂದು ವೇಳೆ ಯಾವುದಾದರೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ ಸ್ಥಾನಗಳಿಗೆ ಚುನಾವಣೆ ನಡೆದು ಹೋಗಿದ್ದರೆ, ಅದು ಈ ಅರ್ಜಿಯ ಅಂತಿಮ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಿದ ನ್ಯಾಯಪೀಠ, ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ