ಆ್ಯಪ್ನಗರ

ಮಸ್ಕಿ ಶಾಸಕರ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಮಸ್ಕಿ ಶಾಸಕ ಪ್ರತಾಪ್‌ಗೌಡ ಪಾಟೀಲ್‌ ಅವರ ಆಯ್ಕೆ ಅಸಿಂಧುಗೊಳಿಸಬೇಕು, ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಕೋರಿ ಬಸವನಗೌಡ ತುರುವಿಹಾಳ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

Vijaya Karnataka 28 Sep 2020, 11:29 pm
ಬೆಂಗಳೂರು: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಪ್ರತಾಪ್‌ಗೌಡ ಪಾಟೀಲ್‌ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಇದರಿಂದಾಗಿ ಸದ್ಯಕ್ಕೆ ಉಪಚುನಾವಣೆಗೆ ಇದ್ದ ಅಡ್ಡಿ ನಿವಾರಣೆಯಾಗಿದೆ.
Vijaya Karnataka Web Karnataka High Court


ಮಸ್ಕಿ ಶಾಸಕ ಪ್ರತಾಪ್‌ಗೌಡ ಪಾಟೀಲ್‌ ಆಯ್ಕೆ ಅಸಿಂಧುಗೊಳಿಸಬೇಕು, ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಕೋರಿ ಬಸವನಗೌಡ ತುರುವಿಹಾಳ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ.ಎಸ್‌. ಮುದಗಲ್‌ ಅವರಿದ್ದ ಏಕಸದಸ್ಯಪೀಠ, ಈ ತೀರ್ಪು ಪ್ರಕಟಿಸಿದೆ.

ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಬೇಕೆಂಬ ಮನವಿಗೆ ಪೂರಕವಾಗಿ ಅರ್ಜಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ. ಆದ್ದರಿಂದ, ಆ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಪೀಠ, ಅರ್ಜಿ ವಜಾಗೊಳಿಸಿದೆ.

2018ರಲ್ಲಿ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರತಾಪ್‌ಗೌಡ ಪಾಟೀಲ್‌ ಮತದಾರರಿಗೆ ಆಮಿಷವೊಡ್ಡಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಪ್ರಜಾಪ್ರತಿನಿಧಿ ಕಾಯಿದೆ ಹಾಗೂ ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ತುರುವಿನಹಾಳ್‌ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಮಧ್ಯೆ, ಪ್ರತಾಪ್‌ಗೌಡ ಪಾಟೀಲ್‌ ಅನರ್ಹಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ