ಆ್ಯಪ್ನಗರ

ಸುದೀಪ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಧಾರಾವಾಹಿ ಚಿತ್ರೀಕರಣಕ್ಕೆ ಬಳಸಿದ ಮನೆಯ ಬಾಡಿಗೆ ಕಟ್ಟಿಲ್ಲ ಎಂಬ ...

Vijaya Karnataka 28 Mar 2019, 5:00 am
ಬೆಂಗಳೂರು: ಧಾರಾವಾಹಿ ಚಿತ್ರೀಕರಣಕ್ಕೆ ಬಳಸಿದ ಮನೆಯ ಬಾಡಿಗೆ ಕಟ್ಟಿಲ್ಲ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಚಿತ್ರನಟ ಸುದೀಪ್‌ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್‌ ಬುಧವಾರ ಮಧ್ಯಂತರ ತಡೆ ನೀಡಿದೆ.
Vijaya Karnataka Web hamer


ಸುದೀಪ್‌ ಸಲ್ಲಿಸಿದ್ದ ಅರ್ಜಿ ಆಲಿಸಿದ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಂತರ ಅಧೀನ ನ್ಯಾಯಾಲಯ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್‌ ಹಾಗೂ ವಿಚಾರಣೆಗೆ ಈ ಮಧ್ಯಂತರ ತಡೆ ಆದೇಶ ನೀಡಿದೆ.

ಅಲ್ಲದೆ, ದೂರುದಾರ ದೀಪಕ್‌ ಮಯೂರ್‌ ಪಟೇಲ್‌ ಹಾಗೂ ಚಿಕ್ಕಮಗಳೂರು ತಾಲೂಕು ಮಲ್ಲಂದೂರು ಪೊಲೀಸ್‌ ಠಾಣಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿರುವ ನ್ಯಾಯಪೀಠ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಏ.22ಕ್ಕೆ ಮುಂದೂಡಿದೆ.

ಕಿಚ್ಚ ಪೊ›ಡಕ್ಷ ನ್ಸ್‌ ವತಿಯಿಂದ ನಿರ್ಮಾಣವಾದ 'ವಾರಸ್ದಾರ' ಧಾರಾವಾಹಿ ಚಿತ್ರೀಕರಣಕ್ಕಾಗಿ ಸುದೀಪ್‌ ಅವರು ಚಿಕ್ಕಮಗಳೂರು ತಾಲೂಕು ಬೈಗೂರಿನ ದೀಪಕ್‌ ಮಯೂರ್‌ ಅವರ ಕಾಫಿತೋಟ ಮತ್ತು ಪುರಾತನ ಮನೆಯನ್ನು ಬಳಸಿಕೊಂಡಿದ್ದರು. ಆದರೆ ಅದಕ್ಕಾಗಿ ಸುದೀಪ್‌ ಸ್ಥಳ ಬಾಡಿಗೆ ಪಾವತಿಸಿಲ್ಲ ಮತ್ತು ಸ್ಥಿರಾಸ್ತಿಗೆ ನಷ್ಟ ಉಂಟು ಮಾಡಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ದೀಪಕ್‌ ಮಯೂರ್‌ ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಮಗಳೂರು 2ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅದರ ವಿಚಾರಣೆಗೆ ಸುದೀಪ್‌ ಗೈರು ಹಾಜರಾದ ಕಾರಣ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ